ಉಡುಪಿ : ಲಾರಿ ಢಿಕ್ಕಿ – ಸಬ್ ಇನ್ ಸ್ಪೆಕ್ಟರ್ ದುರ್ಮರಣ

ಡುಪಿ : ಲಾರಿ ಢಿಕ್ಕಿ ಹೊಡೆದು ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಅಂಬಾಗಿಲಿನಲ್ಲಿ ಗುರುವಾರ ರಾತ್ರಿ ನಡೆದಿದೆ.

ಅತೀ ವೇಗದಿಂದ ಆಗಮಿಸಿದ ಲಾರಿ ಚಾಲಕ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಶಂಕರ್(52) ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಶಂಕರ್ ಬ್ರಹ್ಮಾವರದ ಉಪ್ಪೂರು ನಿವಾಸಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಶಂಕರ್ ಅವರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Check Also

ರೋಟರಿ ಉಡುಪಿ: ವಿದ್ಯಾರ್ಥಿಗಳ ದತ್ತು ಸ್ವೀಕಾರ..!

ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ, ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ ಕಾರ್ಯಕ್ರಮವು ಸೋಮವಾರ …

Leave a Reply

Your email address will not be published. Required fields are marked *

You cannot copy content of this page.