ಉಡುಪಿ : ಲಾರಿ ಢಿಕ್ಕಿ ಹೊಡೆದು ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಅಂಬಾಗಿಲಿನಲ್ಲಿ ಗುರುವಾರ ರಾತ್ರಿ ನಡೆದಿದೆ.
ಅತೀ ವೇಗದಿಂದ ಆಗಮಿಸಿದ ಲಾರಿ ಚಾಲಕ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಶಂಕರ್(52) ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಶಂಕರ್ ಬ್ರಹ್ಮಾವರದ ಉಪ್ಪೂರು ನಿವಾಸಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಶಂಕರ್ ಅವರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.