March 16, 2026
WhatsApp Image 2023-12-30 at 9.01.58 AM

ಬಂಟ್ವಾಳ: ಲಾರಿಯೊಂದು ಡಿಕ್ಕಿಯಾಗಿ ಬೈಕ್ ನ ಹಿಂಬದಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿ.ಸಿ.ರೋಡ್ ಸರ್ಕಲ್ ಬಳಿ ನಡೆದಿದೆ. ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ.

ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸಹಸವಾರ ಡಾಮರು ರಸ್ತೆಗೆ ಬಿದ್ದಿದ್ದು, ಆತನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಡಿಕ್ಕಿ ಹೊಡೆದ ಲಾರಿ ಸಹಿತ ಚಾಲಕ ಪರಾರಿಯಾಗಿದ್ದು, ಬಳಿಕ ಪೊಲೀಸರು ಲಾರಿಯನ್ನು ಪತ್ತೆ ಮಾಡಿದ್ದಾರೆ.

ಬೈಕ್ ಸವಾರ ತನ್ನ ಸ್ನೇಹಿತನ ಜೊತೆ ಅಜಿಲಮೊಗರು ಮಸೀದಿಯಲ್ಲಿ ನಡೆಯುವ ಉರೂಸ್ ಕಾರ್ಯಕ್ರಮಕ್ಕೆ ತೆರಳುವವರು ಎಂದು ಹೇಳಲಾಗಿದೆ.

ಬಂಟ್ವಾಳ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ಬಳಿಕ ಬಿಸಿರೋಡಿನ ಎನ್.ಜಿ.ಸರ್ಕಲ್ ನಲ್ಲಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು.

About The Author

Leave a Reply

Your email address will not be published. Required fields are marked *

You cannot copy content of this page.