
ಬೈಕ್ ಗೆ ಕಾರೊಂದು ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡ್ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ.
ವಿಟ್ಲ ಮೂಲದ ನಿವಾಸಿ, ಮಿಫ್ಸ್ ಸಂಸ್ಥೆಯ ವಿದ್ಯಾರ್ಥಿ ಮಿದ್ಲಾಜ್ ಗಂಭೀರ ಗಾಯಗೊಂಡ ಬೈಕ್ ಸವಾರ. ಸಹ ಸವಾರ ಕೂಡ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಡ್ಯಾರ್ ನಲ್ಲಿ ಕಾರ್ಯಾಚರಿಸುತ್ತಿರುವ ಮಿಫ್ಸ್ ಸಂಸ್ಥೆಯಲ್ಲಿ ಫೈರ್ ಅಂಡ್ ಸೇಫ್ಟಿ ಕೋರ್ಸ್ ಕಲಿಯುತ್ತಿದ್ದ ವಿದ್ಯಾರ್ಥಿಗಳಿಬ್ಬರು ಬೈಕ್ ನಲ್ಲಿ ಎಂದಿನಂತೆ ಕೋರ್ಸ್ ಮುಗಿಸಿ ಅಡ್ಯಾರ್ ನಿಂದ ವಿಟ್ಲದತ್ತ ತೆರಳುತ್ತಿದ್ದ ವೇಳೆ ತಲಪಾಡಿಯಲ್ಲಿ ರಾಂಗ್ ಸೈಡ್ ನಿಂದ ಬಂದ ಕಾರು ಡಿಕ್ಕಿಯಾಗಿದೆ.
ಘಟನೆಯಲ್ಲಿ ಬೈಕ್ ನಜ್ಜುಗುಜ್ಜಾಗಿದೆ. ಬಂಟ್ವಾಳ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
