December 21, 2024
WhatsApp Image 2022-12-31 at 4.05.37 PM

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ 2023ರ ಫೆಬ್ರವರಿ 11 ರಂದು ರಾಷ್ಟ್ರೀಯ ಲೋಕ್ ಅದಾಲತ್/ ಮೆಗಾ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ತಿಳಿಸಿದ್ದಾರೆ.

ಅದಾಲತ್ ನಲ್ಲಿ ಸಾರ್ವಜನಿಕರು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಷೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣ, ರಾಜ್ಯ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣ, ವಿಚ್ಛೇದನ ಹೊರತುಪಡಿಸಿ ವೈವಾಹಿಕ ಮತ್ತು ಕುಟುಂಬ ನ್ಯಾಯಾಲಯದ ಪ್ರಕರಣ, ಜಿಲ್ಲಾ ಗ್ರಾಹಕ ಪರಿಹಾರ ಆಯೋಗದಲ್ಲಿನ ಪ್ರಕರಣ, ಚೆಕ್ ಅಮಾನ್ಯ ಪ್ರಕರಣ, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣ, ಮೋಟಾರು ವಾಹನ ಪ್ರಕರಣ, ನ್ಯಾಯಾಧೀಕರಣದ ಪ್ರಕರಣ, ಕಾರ್ಮಿಕರ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣ, ಭೂಸ್ವಾಧೀನ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ ಹಾಗೂ ಪಿಂಚಣಿ ಪ್ರಕರಣ, ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣ ಹಾಗೂ ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.

About The Author

Leave a Reply

Your email address will not be published. Required fields are marked *

You cannot copy content of this page.