ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಸಂಸತ್ತಿನಲ್ಲಿ 2023-24ನೇ ಹಣಕಾಸು ವರ್ಷದ ಬಜೆಟ್ ಮಂಡನೆ ಆರಂಭ ಮಾಡಿದ್ದು. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಇದೀಗ ಬಜೆಟ್ನಲ್ಲಿ ಮಧ್ಯಮ ವರ್ಗದವರಿಗೆ ಬಂಪರ್ ಗಿಫ್ಟ್ ನೀಡಲಾಗಿದ್ದು, 7 ಲಕ್ಷದವರೆಗೆ ಆದಾಯ ತೆರಿಗೆ ಕಟ್ಟಬೇಕಿಲ್ಲ ಎಂದು ಘೋಷಿಸಲಾಗಿದೆ.
ಮಧ್ಯಮ ವರ್ಗಕ್ಕೆ ಬಂಪರ್ ಬಜೆಟ್ ಘೋಷಣೆ ಮಾಡಲಾಗಿದ್ದು, ಹೊಸ ತೆರಿಗೆ ಸ್ಲಾಬ್ ಘೋಷಿಸಿದ ನಿರ್ಮಲಾ7 ಲಕ್ಷದವರೆಗೆ ಆದಾಯ ತೆರಿಗೆ ವಿನಾಯಿತಿ ಕೊಟ್ಟಿದ್ದಾರೆ. 3 ಲಕ್ಷದಿಂದ 6 ಲಕ್ಷದವರೆಗೆ ಶೇ.5ರಷ್ಟು ತೆರಿಗೆ ಕಟ್ಟಬೇಕಾಗುತ್ತದೆ.
36 ಲಕ್ಷದವರೆಗಿನ ಆದಾಯದ ರಿಟರ್ನ್ಸ್ ಪಡೆಯಬಹುದು, 6 ರಿಂದ 9 ಲಕ್ಷ ರೂ.ವರೆಗೂ ಶೇ.10ರಷ್ಟು ತೆರಿಗೆ, 9 ಲಕ್ಷದಿಂದ 12 ಲಕ್ಷರೂ ವರೆಗೆ ಶೇ.12ರಷ್ಟು ತೆರಿಗೆ, 12 ರಿಂದ 15 ಲಕ್ಷರೂ ವರೆಗಿನ ಆದಾಯಕ್ಕೆ ಶೇ.20 ರಷ್ಟು ತೆರಿಗೆ, 15 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ ಕಟ್ಟಬೇಕಾಗುತ್ತದೆ.