May 14, 2025
WhatsApp Image 2025-04-01 at 3.08.08 PM

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 1 ರಿಂದ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಇದೀಗ ಅದರ ಫಲಿತಾಂಶವು ಬಹುತೇಕ ಮುಂದಿನ ವಾರ ಪ್ರಕಟವಾಗುವ ಸಾಧ್ಯತೆ ಇದೆ.

ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳಲಿದೆ. ಏಪ್ರಿಲ್ 11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

About The Author

Leave a Reply

Your email address will not be published. Required fields are marked *

<p>You cannot copy content of this page.</p>