ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರ್ತಿ (97) ವಯೋಸಹಜ ಅನಾರೋಗ್ಯದಿಂದ ಜೂನ್ 30 ರಂದು ನಿಧನರಾದರು.
ಕೋಟದ ಕೋಟತಟ್ಟು ನಿವಾಸಿಯಾಗಿದ್ದ ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸಂಸದ ಪೂಜಾರಿಯವರು ತನ್ನ ಯಶಸ್ವಿನಲ್ಲಿ ತಾಯಿಯ ಪಾತ್ರ ಮಹತ್ವದಿದ್ದೆ ಎಂದು ಕಾರ್ಯಕ್ರಮಗಳ ವೇದಿಕೆ ಭಾಷಣಗಳಲ್ಲಿ ನೆನಪಿಸಿಕೊಳ್ಳುತ್ತಿದ್ದರು.
ಮೃತರಿಗೆ ಸಂತಾಪ
ಮೃತರಿಗೆ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಸುನೀಲ್ ಕುಮಾರ್, ಉದ್ಯಮಿ ಆನಂದ ಸಿ.ಕುಂದರ್ ಸಹಿತ ಉಡುಪಿ, ದಕ್ಷಿಣ ಕನ್ನಡದ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.