ಉಡುಪಿ: ಸರಕಾರಿ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ, ಕ್ರಮಕ್ಕೆ ಆಗ್ರಹ

ಉಡುಪಿ: ತಾಲೂಕಿನ ಅಲೆವೂರು ಗ್ರಾಪಂ ವ್ಯಾಪ್ತಿಯ ಪ್ರಗತಿನಗರ ಕೇಂದ್ರೀಯ ವಿದ್ಯಾಲಯದ ಬಳಿ ಇರುವ ಸರಕಾರಿ ಸ್ಥಳದಲ್ಲಿ ಹೊರ ರಾಜ್ಯದವರು ಸರಕಾರಿ ಜಾಗವನ್ನು ಅಕ್ರಮವಾಗಿ ತಮ್ಮದಾಗಿಸಿಕೊಂಡು ಮನೆ ನಿರ್ಮಾಣ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಉಡುಪಿಗೆ ದುಡಿಯಲು ಬರುವ ಕಾರ್ಮಿಕರು ಅಕ್ರಮವಾಗಿ ಸರಕಾರಿ ಜಾಗಗಳಲ್ಲಿ ನೆಲೆ ಕಂಡುಕೊಳ್ಳುತ್ತಿದ್ದಾರೆ. ಇಲ್ಲಿನ ಸಾಕಷ್ಟು ಸರಕಾರಿ ಭೂಮಿ ಹೊರರಾಜ್ಯದವರ ಪಾಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಸಾಕಷ್ಟು ಮಂದಿ ನಿವೇಶನ ರಹಿತರು ಇದ್ದಾರೆ. ಆದರೆ ಅವರಿಗೆ ನಿವೇಶನ ಹಂಚುವ ಯಾವುದೇ ಕಾರ್ಯ ಆಗುತ್ತಿಲ್ಲ. ಆದರೆ, ಇಲ್ಲಿನ ಸರಕಾರಿ ಜಾಗ ಅನ್ಯ ರಾಜ್ಯದವರ ಪಾಲಾಗುತ್ತಿರುವುದು ಮಾತ್ರ ದುರಂತವೇ ಸರಿ. ಹೊರ ರಾಜ್ಯದವರು ಇಲ್ಲಿಗೆ ಬಂದು ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮನೆ ನಿರ್ಮಾಣ ಮಾಡುತ್ತಿದ್ದಾರೆ. ಆದ್ದರಿಂದ ಜಿಲ್ಲಾಡಳಿತ, ಗ್ರಾಪಂ ಹಾಗೂ ಸಂಬಂಧಪಟ್ಟ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಮಾಜ ಸೇವಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.

Check Also

ಮಂಗಳೂರು: ಪ್ರವೀಣ್ ನೆಟ್ಟಾರು ಪ್ರಕರಣ ಆರೋಪಿಗಳಿಗೆ ಮರಣದಂಡನೆ ನೀಡಿ – ಪತ್ನಿ ನೂತನ

ಮಂಗಳೂರು: ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ರೂವಾರಿ ಸುಳ್ಯದ ಮುಸ್ತಫಾ ಪೈಚಾರು ಎನ್ಐಎಗೆ ಬಲೆಗೆ …

Leave a Reply

Your email address will not be published. Required fields are marked *

You cannot copy content of this page.