ಶಿವಮೊಗ್ಗ: ಜಿಲ್ಲೆಯ ಖ್ಯಾತ ಮೂಳೆ ತಜ್ಞ ನಗರದ ಗೋಪಾಳದಲ್ಲಿರುವ ಮನೆಯಲ್ಲಿ ಬೆಳಗ್ಗೆ 6 ಗಂಟೆಗೆ ವೈದ್ಯರು ತಮ್ಮ ಕೊಠಡಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಡಾ.ಲೋಲಿತ್ (40) ಮೃತ ದುರ್ದೈವಿಯಾಗಿದ್ದು,ನಗರದ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಅವರ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಿದೆ.
ಡಾ.ಲೋಲಿತ್ ಆರೋಗ್ಯ ಸಮಸ್ಯೆ ಬಳಲುತ್ತಿದ್ದರು ಎನ್ನಲಾಗಿದ್ದು, ಸಾವಿನ ನಿಖರ ಕಾರಣ ಪೊಲೀಸರ ತನಿಖೆಯಿಂದ ಬೆಳಕಿಗೆ ಬರಬೇಕಿದೆ. ತುಂಗನಗರ ಪೊಲೀಸ್ ಠಾಣೆ ಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.