ನೋಟು ಅಮಾನ್ಯೀಕರಣ: ಇಂದು ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: 2016ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 1000 ಮತ್ತು 500 ರೂಪಾಯಿ ಮುಖ ಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಂಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ 50ಕ್ಕೂ ಹೆಚ್ಚು ಅರ್ಜಿಗಳ ಕುರಿತಾದ ತೀರ್ಪು ಇಂದು ಪ್ರಕಟವಾಗುವ ನಿರೀಕ್ಷೆಯಿದೆ.

ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡುವುದಾಗಿ ಪ್ರಕಟಿಸಿತ್ತು. ಮಹತ್ವದ ತೀರ್ಮಾನ ತೆೆಗೆದುಕೊಂಡ ಕೇಂದ್ರ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ 500 ಮತ್ತು 1000 ರೂಪಾಯಿ ಮೌಲ್ಯದ ನೋಟುಗಳನ್ನು ಅಮಾನ್ಯೀಕರಣ ಮಾಡಿತ್ತು. ಅಂದರೆ ಚಲಾವಣೆಯಿಂದ ಹಿಂತೆಗೆದುಕೊಂಡಿತ್ತು.

ಚಲಾವಣೆಯಿಂದ ಹಿಂತೆಗೆದುಕೊಳ್ಳಲಾದ ನೋಟುಗಳನ್ನು ಬ್ಯಾಂಕ್ ಗಳಿಗೆ ಸಲ್ಲಿಸಿ ಹೊಸ ಕರೆನ್ಸಿ ಪಡೆದುಕೊಳ್ಳುವ ಅವಕಾಶ ನೀಡಲಾಗಿತ್ತು. ಈ ವೇಳೆ ಸಂಭವಿಸಿದ ನೂಕು ನುಗ್ಗಲಿನಲ್ಲಿ ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದರು.ನ್ಯಾಯಮೂರ್ತಿ ಎಸ್ ಎ ನಜೀರ್ ನೇತೃತ್ವದ ಸಾಂವಿಧಾನಿಕ ಪೀಠ ಇಂದು ತೀರ್ಪು ನೀಡಲಿದೆ. ನ್ಯಾಯಮೂರ್ತಿ ನಜೀರ್ ಅವರು ಮೂಲತ:ಕರ್ನಾಟಕದ ಕಾರ್ಕಳದವರಾಗಿದ್ದಾರೆ. ಜನವರಿ 4ರಂದು ಅವರು ನಿವೃತ್ತರಾಗಲಿದ್ದಾರೆ

Check Also

ಉಡುಪಿ -ಅಂಬಾಗಿಲು ಮುಖ್ಯ ರಸ್ತೆಯಲ್ಲಿ ಭೀಕರ ಅಪಘಾತ- ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ಶುಕ್ರವಾರ …

Leave a Reply

Your email address will not be published. Required fields are marked *

You cannot copy content of this page.