ದೆವ್ವ ಬಿಡಿಸುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದ ಮಂತ್ರವಾದಿಯೊಬ್ಬನನ್ನು ಉತ್ತರ ಪ್ರದೇಶ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕ್ ಕುಮಾರ್ ಬಂಧಿತ ಆರೋಪಿ.
ಈ ಬಗ್ಗೆ ಕೌಶಾಂಬಿ ಜಿಲ್ಲೆಯ ಪಿಪ್ರಿ ಪೊಲೀಸರು ಬಂಧಿಸಿ ಪೋಕ್ಸೊ ಅಡಿ ಪ್ರಕರಣ ದಾಖಲಿಸಿದ್ದಾರೆ. ಖಾಯಿಲೆಯಿಂದ ಬಳಲುತ್ತಿದ್ದ ತಮ್ಮ ಮಗಳನ್ನು ಗುಣಮುಖ ಮಾಡುತ್ತಾರೆ ಎಂದು ಅಶೋಕ್ ಕುಮಾರ್ ಬಳಿ ಬಾಲಕಿಯ ತಂದೆ ಕರೆದುಕೊಂಡು ಹೋಗಿದ್ದರು. ಕೆಲ ದಿನಗಳ ನಂತರ ಬಾಲಕಿಯನ್ನು ಪರಿಚಯ ಮಾಡಿಕೊಂಡು ದೆವ್ವ ಬಿಡಿಸುತ್ತೇನೆಂದು ಅಶೋಕ್ ಕುಮಾರ್ ಅತ್ಯಾಚಾರ ಮಾಡಿದ್ದಾನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪಿಪ್ರಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ರವಣ್ ಕುಮಾರ್ ಸಿಂಗ್ ತಿಳಿಸಿದ್ದಾರೆ.