ಉಡುಪಿ: ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಕಡ್ಡಾಯ- ಜಿಲ್ಲಾಧಿಕಾರಿ

ಉಡುಪಿ: ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಐದನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, 3 ತಿಂಗಳು ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸುವಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದ್ದಾರೆ. ಸೋಮವಾರ ಬೈಲೂರಿನ ಪಶುವೈದ್ಯಕೀಯ ಪಾಲಿಕ್ಲಿನಿಕ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಡುಪಿ ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಇಲಾಖೆಯ ಹಾಗೂ ಕೆಎಂಎಫ್ ಅಧಿಕಾರಿಗಳು ಹಾಗೂ ಖಾಸಗಿ ಲಸಿಕೆದಾರರು ಲಸಿಕಾ ಕಾರ್ಯಕ್ರಮದಲ್ಲಿ ಭಾಗವಸಿ ರೈತರಿಗೆ ಆರ್ಥಿಕವಾಗಿ ನಷ್ಟ ಉಂಟುಮಾಡುವ ಕಾಲುಬಾಯಿ ರೋಗದ ವಿರುದ್ಧದ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವಂತೆ ತಿಳಿಸಿದರು.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.