

ಉಡುಪಿ: ಕರಾವಳಿ ಕರ್ನಾಟಕದಲ್ಲಿ ಮತ್ತೆ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆಗಿದೆ. ಇದರ ಬೆನ್ನಲ್ಲೇ ಇತ್ತ ಉಡುಪಿ ತಾಲೂಕಿನ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಎರಡು ಸ್ಥಳಗಳಲ್ಲಿ ಯುವಕರ ಮೇಲೆ ಚೂರಿ ಇರಿತ ನಡೆದಿದೆ. ಅಡ್ಯಾರ್ ಕಣ್ಣೂರು ಮತ್ತು ಉಳ್ಳಾಲದ ತೊಕ್ಕೋಟು ಒಳಪೇಟೆಯಲ್ಲಿ ಯುವಕರಿಗೆ ಚೂರಿ ಇರಿಯಲಾಗಿದೆ ಎಂಬ ಮಾಹಿತಿ ಲಭಿಸಿದೆ.