ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಶರಣಾಗತಿಗೆ ಸೂಚಿಸಿದ ಗಡುವು ಅಂತ್ಯ

ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿಗಳ ಶರಣಾಗತಿಗೆ ಸೂಚಿಸಿದ ಗಡುವು ಮುಗಿದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗಿನ ಅಬ್ದುಲ್‌ ನಾಸಿರ್‌, ಅಬ್ದುಲ್‌ ರೆಹಮಾನ್‌ ಮತ್ತು ಬೆಳ್ತಂಗಡಿಯ ನೌಷಾದ್‌ ಹಾಗೂ ಮತ್ತೆ ಐವರು ಸೇರಿ ಒಟ್ಟು 8 ಮಂದಿ ಶಂಕಿತ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಇನ್ನು ತುಫೈಲ್‌, ಮೊಹಮ್ಮದ್‌ ಮುಸ್ತಾಫ‌ ಸುಳಿವಿಗೆ ತಲಾ 5 ಲಕ್ಷ ರೂ. ಹಾಗೂ ಉಮ್ಮರ್‌ ಫಾರೂಕ್‌, ಅಬೂಬಕ್ಕರ್‌ ಸಿದ್ದಿಕ್‌ ಸುಳಿವು ನೀಡಿದಲ್ಲಿ ತಲಾ 2 ಲಕ್ಷ ರೂ. ಬಹುಮಾನವನ್ನು ಘೋಷಿಸಲಾಗಿದೆ.

ಜೂ.30ರೊಳಗೆ ತಲೆಮರೆಸಿಕೊಂಡಿರುವ ಆರೋಪಿಗಳು ಶರಣಾಗಬೇಕು, ಇಲ್ಲವೇ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಸೂಚನೆ ನೀಡಲಾಗಿತ್ತು. ಅದರೊಂದಿಗೆ ಧ್ವನಿವರ್ಧಕದ ಮೂಲಕ ಉದ್ಘೋಷಣೆ ಮಾಡಿ, ಆರೋಪಿಗಳ ಮನೆಗಳಲ್ಲೂ ಭಿತ್ತಿಪತ್ರ ಹಚ್ಚುವ ಮೂಲಕ ಮಾಹಿತಿ ನೀಡಲಾಗಿತ್ತು. ಆದರೆ ಆರೋಪಿಗಳು ಶರಣಾಗಿಲ್ಲ ಎಂದು ತಿಳಿದುಬಂದಿದೆ.

ಇನ್ನು ತಲೆಮರೆಸಿಕೊಂಡಿಕೊಂಡುವ ಆರೋಪಿಗಳ ಆಸ್ತಿ ಜಪ್ತಿ ಮಾಡಬಹುದು ಎನ್ನಲಾಗಿತ್ತು ಆದರೆ ಇದಕ್ಕೂ ಸಮಯ ತಗಲುತ್ತದೆ. ಆರೋಪಿಯ ಹೆಸರಿನಲ್ಲಿರುವ ಚರಾಸ್ತಿ ಹಾಗೂ ಸ್ಥಿರಾಸ್ತಿಗಳ ಮಾಹಿತಿಯನ್ನು ಎನ್‌ಐಎ ಅಧಿಕಾರಿಗಳು ಕಂದಾಯ ಇಲಾಖೆ, ಬ್ಯಾಂಕ್‌ಗಳು ಮತ್ತಿತರ ಮೂಲಗಳಿಂದ ಸಂಗ್ರಹಿಸಿ, ಆರೋಪಿಗಳ ಹೆಸರಿನಲ್ಲಿರುವ ಆಸ್ತಿಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ, ಬಳಿಕ ಆರೋಪಿಯದ್ದೇ ಆಸ್ತಿ ಎಂದು ದೃಢೀಕರಣಗೊಂಡಲ್ಲಿ ಮುಟ್ಟುಗೋಲು ಹಾಕಿಕೊಂಡು ಸರಕಾರದ ವಶಕ್ಕೆ ಪಡೆಯಯಬಹುದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.