June 1, 2025 4:38:26 PM
WhatsApp Image 2023-08-02 at 4.53.20 PM

ಕಡಬ; ಡೆಂಟಲ್ ಕ್ಲಿನಿಕ್ ಗೆಂದು ಹೋದ ವಿವಾಹಿತೆ ಯುವತಿ ನಾಪತ್ತೆಯಾಗಿರುವ ಘಟನೆ ಕಡಬದಲ್ಲಿ ನಡೆದಿದೆ.ಇಲ್ಲಿನ ಬಿಳಿನೆಲೆ ಗ್ರಾಮದ ದೇವಸ್ಯ ಮನೆ ಮಾಯಿಲಪ್ಪ ಗೌಡ ಅವರ ಪುತ್ರಿ ತೀರ್ಥಲತಾ ಕಾಣೆಯಾದ ವಿವಾಹಿತೆ.

ಈ ಬಗ್ಗೆ ಅವರ ತಂದೆ ದೂರು ನೀಡಿದ್ದು, ತನ್ನ ಮಗಳನ್ನು ಗದಗ ಮೂಲದ ಮುಂಡರಗಿಯ ಶಿವರಾಜ್ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ತಂದೆ ಮನೆಗೆ ಬಂದಿದ್ದ ಆಕೆ ಸುಬ್ರಹ್ಮಣ್ಯದಲ್ಲಿರುವ ಡೆಂಟಲ್ ಕ್ಲಿನಿಕ್ ಗೆ ಚಿಕಿತ್ಸೆಗಾಗಿ ತೆರಳಿ ಬಳಿಕ ಮನೆಗೆ ಬಂದಿಲ್ಲವೆಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರು ದೂರು ದಾಖಲಿಸಿಕೊಂಡು ಸಾರ್ವಜನಿಕ ಪ್ರಕಟನೆ ಹೊರಡಿಸಿ ಮಾಹಿತಿ ಸಿಕ್ಕಲ್ಲಿ ಠಾಣೆಗೆ ತಿಳಿಸುವಂತೆ ಕೋರಿದ್ದಾರೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>