ಅರುಣ್ ಪುತ್ತಿಲಗೆ ಜಾಮೀನು ಮಂಜೂರು..! ಸುಳ್ಳು ಆರೋಪಗಳಿಗೆ ಕಾನೂನು ಹೋರಾಟ – ಪುತ್ತಿಲ

ಪುತ್ತೂರು : ಮಹಿಳಾ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣದ ಹಿನ್ನಲೆಯಲ್ಲಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾದ ಅರುಣ್‌ ಕುಮಾರ್‌ ಪುತ್ತಿಲಗೆ ಪುತ್ತೂರಿನ ಸಿವಿಲ್‌ ಜಡ್ಜ್‌ ಹಾಗೂ ಜೆಎಂಎಫ್‌ ಸಿ ನ್ಯಾಯಾಲಯ. ಜಾಮೀನು ಮಂಜೂರು ಮಾಡಿದೆ.

ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು ಮುಂದಿನ ದಿನಗಳಲ್ಲಿ ನನ್ನ ವಿರುದ್ಧ ಬಂದಂತಹ ಆರೋಪಗಳಿಗೆ ಕಾನೂನು ರೀತಿಯ ಹೋರಾಟ ರಡುತ್ತೇನೆ ಎಂದು ಅರುಣ್‌ ಕುಮಾರ್‌ ಪುತ್ತಿಲ ತಿಳಿಸಿದ್ದಾರೆ.

ಘಟನೆ ಹಿನ್ನೆಲೆ: 

ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಮಹಿಳೆಯೊಬ್ಬರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

47 ವರ್ಷದ ಮಹಿಳೆ ತಮ್ಮ ಮೇಲೆ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ದೂರಿನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.

2023 ಜೂನ್​ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Check Also

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು …

Leave a Reply

Your email address will not be published. Required fields are marked *

You cannot copy content of this page.