5 ಶಂಕಿತ ಉಗ್ರರ ಬಂಧನ ಪ್ರಕರಣವನ್ನು NIA ಗೆ ವರ್ಗಾಯಿಸಿದ CCB

ಬೆಂಗಳೂರು : ಬೆಂಗಳೂರಲ್ಲಿ ಸ್ಫೋಟಕ್ಕೆ ಸಂಚಿಸಿದ ಐವರು ಶಂಕಿತ ಉಗ್ರರ ಪ್ರಕರಣವನ್ನು ಸಿಸಿಬಿಯು ಎನ್‌ಐಎಗೆ ಪ್ರಕರಣವನ್ನು ವರ್ಗಾಯಿಸಿದೆ.ಪ್ರಕರಣ ಸಂಬಂಧ ಎನ್​​ಐಎ ಅಧಿಕಾರಿಗಳು ಎಫ್​ಐಆರ್​ (FIR) ದಾಖಲಿಸಿಕೊಂಡಿದ್ದಾರೆ. ಸುಹೇಲ್ ಅಹಮದ್, ಜಾಹೀದ್ ತಬ್ರೇಜ್, ಮುದಾಸೀರ್ ಪಾಷಾ, ಮಹಮ್ಮದ್ ಫೈಜಲ್ ರಬ್ಬಾನಿ ಮತ್ತು ಮಹಮ್ಮದ್ ಉಮರ್‌ ಬಂಧಿತ ಶಂಕಿತ ಉಗ್ರರು.

ಸದ್ಯ ಎನ್​ಐಎ ಅಧಿಕಾರಿಗಳು ಸಿಸಿಬಿ ಬಂಧಿಸಿದ್ದ ಆರೋಪಿಗಳನ್ನು ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

ಈ ಐವರು ಶಂಕಿತ ಉಗ್ರರು ಬೆಂಗಳೂರು ನಗರದಲ್ಲಿ ಸರಣಿ ಸ್ಫೋಟಕ್ಕೆ ಸಂಚಿರೂಪಿಸಿದ್ದರು ಅಲ್ಲದೆ ಇವರು ಗ್ರೈನೆಡ್ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಸಹ ಸಂಗ್ರಹಿಸಿದ್ದರು.ಇದಕ್ಕೆ ಜೈಲಿನಲ್ಲಿ ಇದ್ದುಕೊಂಡೇ ಉಗ್ರ ಜುನೈದ್ ಇವರಿಗೆ ಮಾರ್ಗದರ್ಶನ ನೀಡುತ್ತಿದ್ದ ಎನ್ನಲಾಗುತ್ತಿತ್ತು.

ಆರೋಪಿಗಳು ಸುಲ್ತಾನ್​ ಪಾಳ್ಯದ ಪ್ರಾರ್ಥನಾ ಸ್ಥಳ ಮತ್ತು ಆರ್​.ಟಿ ನಗರದ ಕನಕ ಬಡಾವಣೆಯ ಸೈಯದ್​ ಸುಹೇಲ್​ ಬಾಡಿಗೆ ಮನೆಯಲ್ಲಿ ಸಭೆ ಸೇರಿ ಉಗ್ರ ಚಟುವಟಿಕೆ ಹಾಗೂ ಸ್ಫೋಟ ನಡೆಸುವುದಕ್ಕೆ ಸಂಬಂಧಿಸಿದಂತೆ ಆರೋಪಿಗಳು ಚರ್ಚೆ ನಡೆಸಿದ್ದರು. ಈ ಮಾಹಿತಿ ತಿಳಿದ ಸಿಸಿಬಿ ಪೊಲೀಸರು, ಕೇಂದ್ರ ಗುಪ್ತಚರ ಇಲಾಖೆ ಸಂಪರ್ಕಿಸಿದ್ದರು. ನಂತರ ಎರಡೂ ವಿಭಾಗದ ಸಿಬ್ಬಂದಿ ಇದೇ ವರ್ಷ ಜುಲೈ 19 ರಂದು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದರು.

ಈ ಐವರು ಸಂಕಿತ ಉಗ್ರರನ್ನು ಬಂಧಿಸುವ ವೇಳೆ ಇವರ ಹತ್ತಿರ ಸಂಗ್ರಹಿಸಲಾಗಿದ್ದ ಎನ್ನಲಾದ 7 ನಾಡ ಪಿಸ್ತೂಲ್, 45 ಜೀವಂತ ಗುಂಡುಗಳು, ವಾಕಿಟಾಕಿಗಳು, 12 ಮೊಬೈಲ್​, ಡ್ರಾಗರ್​ ಸೇರಿದಂತೆ ವಿವಿಧ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದರು. ದೇಶದ್ರೋಹ ಚಟುವಟಿಕೆಯಲ್ಲಿ ಭಾಗಿ, ಅಪರಾಧದ ಒಳಸಂಚು, ಶಸ್ತ್ರಾಸ್ರ ಕಾಯ್ದೆ ಅಡಿ ಹೆಬ್ಬಾಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನೂ ಇವರಿಗೆ ಮಾನಿಟರ್ ಮಾಡುತ್ತಿದ್ದ ಉಘ್ರಜನೆ ವಿದೇಶದಲ್ಲಿ ತಲೆಮರ್ಸಿಕೊಂಡಿದ್ದು ಈತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಇದೀಗ ದೇವರು ಸಂಗೀತ ಉಗ್ರರ ಬಂಧನ ಪ್ರಕರಣವನ್ನು ಸಿಸಿಬಿಯು ಎನ್‌ಐಎಗೆ ವರ್ಗಾಯಿಸಿದೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.