ಹೃದಯ ವಿದ್ರಾವಕ ಘಟನೆ; ಶಾಲೆಯಲ್ಲಿಯೇ ಕುಸಿದು ಬಿದ್ದ ಬಾಲಕ- 6ನೇ ತರಗತಿ ವಿದ್ಯಾರ್ಥಿ ಮೃತ್ಯು

ಹುಬ್ಬಳ್ಳಿ: 6ನೇ ತರಗತಿಯ ಬಾಲಕನೊಬ್ಬ ಶಾಲೆಯಲ್ಲಿಯೇ  ಕುಸಿದುಬಿದ್ದಿದ್ದು, ಹೃದಯಾಘಾದಿಂದ ಸಾವನ್ನಪ್ಪಿರುವ ಘಟನೆ ಧಾರವಾಡ  ಜಿಲ್ಲೆಯ ಕಲಘಟಗಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಕಲಘಟಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ  ಮಕ್ತುಮ್ ಮಹ್ಮದ್ ರಫಿ ಮನಿಯಾರ್ (13) ಮೃತ ಬಾಲಕನಾಗಿದ್ದು, ಆತ ಕೆಲ ವರ್ಷಗಳಿಂದಲೇ ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.

ಶಾಲೆಯಲ್ಲಿ ಬಾಲಕ ಕುಸಿದುಬಿದ್ದ ತಕ್ಷಣವೇ ಆತನನ್ನು ಶಿಕ್ಷಕರು ಕಲಘಟಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.