ಕಡಬ : ಸುಬ್ರಹ್ಮಣ್ಯ ಷಷ್ಠಿ ಮಹೋತ್ಸದಲ್ಲಿ ವ್ಯಾಪಾರ ಮಾಡುತ್ತಿದ್ದ ಯುವಕನ ಮೇಲೆ ಪೊಲೀಸರು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಣ ನೀಡುವಂತೆ ಒತ್ತಾಯಿಸಿ ಪೋಲಿಸ್ ವಸತಿ ಗೃಹದಲ್ಲಿ ಚಿತ್ರ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಜ್ಯೂಸ್ ಐಸ್ ಕ್ರೀಂ ವ್ಯಾಪಾರಿ ಕುಟ್ರುಪಾಡಿ ಗ್ರಾಮದ ಭೀಮಗುಂಡಿ ನಿವಾಸಿ ಶಶಿಕಿರಣ್ ಆರೋಪ ಮಾಡುತ್ತಿದ್ದಾನೆ.
ಪಂಚಮಿಯ ರಾತ್ರಿ ಪೊಲೀಸ್ ಸಿಬ್ಬಂದಿ ಭೀಮಣ್ಣ ಗೌಡ ಹಣಕ್ಕಾಗಿ ಒತ್ತಾಯಿಸಿದರು. ನಾನು ಒಂದು ಸಾವಿರ ರೂಪಾಯಿ ನೀಡಿದೆ. ಐದು ಸಾವಿರ ರೂಪಾಯಿ ನೀಡುವಂತೆ ಹೇಳಿದರು. ನಾನು ನೀಡದಿದ್ದಾಗ ಥಳಿಸಿದ್ದಾರೆ ಎಂದು ಆರೋಪಿಸಿದ್ದಾನೆ.
ವಿಷಯ ತಿಳಿದ ಹಿಂದೂ ಜಾಗರಣೆ ವೇದಿಕೆಯ ಕಾರ್ಯಕರ್ತರು ಯುವಕನಿಗೆ ನ್ಯಾಯ ನೀಡಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.