

ಬೆಂಗಳೂರು: ಡ್ರಾಪ್ ಕೊಡುವ ನೆಪದಲ್ಲಿ ಸ್ಕೂಲ್ ಬಸ್‌ನಲ್ಲೇ ಚಾಲಕ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಕುಮಾರ್ ಬಂಧಿತ ಸ್ಕೂಲ್ ಬಸ್ ಚಾಲಕನಾಗಿದ್ದು, ಶಾಲಾ ಮಕ್ಕಳನ್ನು ಡ್ರಾಪ್ ಮಾಡಿ ನಾಯಂಡಹಳ್ಳಿ ಬಳಿ ಹೋಗುತ್ತಿರುವಾಗ ಡ್ರಾಪ್ ಕೊಡುವ ಸೋಗಿನಲ್ಲಿ ಮಹಿಳೆಯನ್ನು ಬಸ್‌ಗೆ ಹತ್ತಿಸಿಕೊಂಡಿದ್ದಾನೆ ಎನ್ನಲಾಗಿದ್ದು, ಬಳಿಕ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ರೇಪ್ ಮಾಡಿದ್ದಾನೆ ಎನ್ನಲಾಗಿದೆ.
ಇದಲ್ಲದೇ ಘಟನೆ ನಡೆದ ಬಳಿಕ ಮಹಿಳೆಯು ಬಸ್ ಪೋಟೋ ಹಿಡಿದುಕೊಂಡು ತಮ್ಮ ಮಗನಿಗೆ ಪೋನ್ ಮಾಡಿ ತಿಳಿಸಿದ್ದಾಳೆ. ಸ್ಥಳಕ್ಕೆ ಆಗಮಿಸಿದ ಮಗ ಬಸ್ ಚಾಲಕನನ್ನು ಪತ್ತೆ ಹಚ್ಚಿ ಥಳಿಸಿ ಪೋಲಿಸ್‌ಗೆ ಮಾಹಿತಿ ನೀಡಿದ್ದಾನೆ. ಘಟನ ಸ್ಥಳಕ್ಕೆ ಚಂದ್ರಲೇಔಟ್ ಪೋಲಿಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.