ಉಡುಪಿ: ಕೇಂದ್ರ ಸರಕಾರದ ಗೆಜೆಟ್ ನೋಟಿಫಿಕೇಶನ್ ಪ್ರಕಾರ ಸುರತ್ಕಲ್‌ನಲ್ಲಿದ್ದ ಟೋಲ್ ಅನ್ನು ಹೆಜಮಾಡಿ ಟೋಲ್‌ನೊಂದಿಗೆ ವಿಲೀನಗೊಳಿಸಲಾಗಿದೆ. ಪರಿಷ್ಕೃತ ದರ ಪಡೆಯುವ ದಿನಾಂಕ ಇನ್ನೂ ನಿರ್ಧಾರವಾಗಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕೋರಿಕೆಯಂತೆ ಹೆಜಮಾಡಿ ಗೇಟ್‌ಗೆ ಸೂಕ್ತ ಭದ್ರತೆ ಕಲ್ಪಿಸಲಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಟೋಲ್ ದರ ಹೆಚ್ಚಳಕ್ಕೆ ಜನಪ್ರತಿನಿಧಿ ಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲಿಯೇ ಅವರ ಸಭೆ ಕರೆಯಲಾಗುತ್ತದೆ. ಸಾರ್ವಜನಿಕರು ಅಥವಾ ಯಾವುದೇ ಸಂಘಟನೆಗಳಿಂದ ಈ ಸಂಬಂಧ ದೂರು ಅಥವಾ ಆಕ್ಷೇಪಣೆಗಳು ಬಂದಿಲ್ಲ. ಬಂದಲ್ಲಿ ಪರಿಶೀಲಿಸಲಾಗುವುದು. ಪರಿಷ್ಕೃತ ದರ ಸಂಗ್ರಹ ಆರಂಭಿ ಸುವ ಮೊದಲು ಹೆದ್ದಾರಿ ಪ್ರಾಧಿಕಾರವು ಸ್ಥಳೀಯವಾಗಿಯೂ ಜಿಲ್ಲಾಡಳಿತಕ್ಕೂ ಮಾಹಿತಿ ನೀಡಲಿದೆ. ಕೇಂದ್ರ ಸರಕಾರದ ಸೂಚನೆಯನ್ನು ಪಾಲಿಸುತ್ತೇವೆ ಎಂದರು.