ಕಾಪು: ತಾಲೂಕಿನ ಕಟಪಾಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66 ಬಳಿ ಟಿಪ್ಪರ್ ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸಹಸವಾರ ಮೃತಪಟ್ಟ ಘಟನೆ ಸಂಭವಿಸಿದೆ.
ಉದ್ಯಾವರ ಬೊಳ್ಳೆಯ ಸುಶಿಕ್ಷಿತ್(20) ಮೃತ ಯುವಕನಾಗಿದ್ದಾನೆ.
ಅಪಘಾತದಿಂದ ಗಾಯಗೊಂಡಿರುವ ಬೈಕ್ ಸವಾರ ಜಯದೀಪ್ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಉದ್ಯಾವರದಿಂದ ಪಡುಬಿದ್ರೆ ಕಡೆ ಬೈಕ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಟಿಪ್ಪರ್ ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸುಶಿಕ್ಷಿತ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರೀಶೀಲನೆ ನಡೆಸಿದರು.