ಉಳ್ಳಾಲ: ಸಮುದ್ರ ತೀರದಲ್ಲಿ ಟ್ರಾಲ್‌ಬೋಟ್ ಅವಘಡ ; 8 ಮೀನುಗಾರರ ರಕ್ಷಣೆ

ಉಳ್ಳಾಲ: ಸಮುದ್ರ ತೀರದಿಂದ ಸುಮಾರು 12.5 ನಾಟಿಕಲ್ ದೂರದಲ್ಲಿ ಟ್ರಾಲ್‌ಬೋಟ್‌ವೊಂದು ಅವಘಡಕ್ಕೀಡಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಬೋಟಿನಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಜ.31ರಂದು ಬಾಲಕೃಷ್ಣ ಎಂಬವರ ಮಾಲಕತ್ವದ ಜಲ-ಮಾತಾ ಬೋಟು ಮೀನುಗಾರಿಕೆಗೆ ತೆರಳುತ್ತಿದ್ದಾಗ ಹಡಗಿನ ಅವಶೇಷಗಳಿಗೆ ತಾಗಿ ಜಖಂಗೊಂಡಿದೆ ಎನ್ನಲಾಗಿದೆ.

ಇನ್ನು ತಕ್ಷಣ ಹತ್ತಿರದಲ್ಲೇ ಇದ್ದ ಲಲಿತಾ ಸಾಗರ ಎಂಬ ಹೆಸರಿನ ಬೋಟಿನಲ್ಲಿದ್ದ ಮೀನುಗಾರರು ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ. ಈ ಕುರಿತು ಕರಾವಳಿ ಕಾವಲು ಪಡೆಯ ಠಾಣೆಗೆ ದೂರು ನೀಡಲಾಗಿದೆ.

Check Also

ಬಂಟ್ವಾಳ: ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ಇದ್ದ ಬ್ಯಾಗ್ ಕಳವು

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನ ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್‌ ಎಗರಿಸಿ ಪರಾರಿಯಾಗಿರುವ …

Leave a Reply

Your email address will not be published. Required fields are marked *

You cannot copy content of this page.