ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದುಬೆಳಗ್ಗೆ 10ಕ್ಕೆ ಬಿಜೆಪಿ ಜಿಲ್ಲಾ ಕಚೇರಿ ಬಳಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶ ಮುಗಿದ ಬಳಿಕ ಕೋಟ ಶ್ರೀನಿವಾಸ್ ಪೂಜಾರಿ ಅವರು ಬಿಜೆಪಿ ನಾಯಕರೊಂದಿಗೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಇನ್ನು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವರು.