
ವಿಟ್ಲ: ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಗುರುವಾರ ನಡೆದಿದೆ.
ಮೃತ ವ್ಯಕ್ತಿಯನ್ನು ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್(38) ಎಂದು ಗುರುತಿಸಲಾಗಿದೆ. ಇವರು ಜೆಸಿಬಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ರಮೇಶ್ ಮಾದಕ ವಸ್ತುಗಳ ಸೇವನೆಗೆ ವ್ಯಸನಿಯಾಗಿದ್ದು, ಮದುವೆಯಾಗಿಲ್ಲ ಎಂಬ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.
