

ದೆಹಲಿ: ಕೇಂದ್ರ ಸರಕಾರ ದೇಶದಾದ್ಯಂತ ಆಧಾರ್ ಕಾರ್ಡ್‌ಅನ್ನು ಕಡ್ಡಾಯಗೊಳಿಸಿದೆ. ಭಾರತೀಯ ನಾಗರಿಕರನ್ನು ಗುರುತಿಸುವುದಕ್ಕಾಗಿ ಹಾಗೂ ದೇಶದ ಭದ್ರತೆ ದೃಷ್ಠಿಯಿಂದ ಆಧಾರ್ ಕಾರ್ಡ್‌ನ್ನು ಜಾರಿಗೊಳಿಸಿದೆ. ಹಾಗಾಗಿ ಜನರು ತಮ್ಮ ಆಧಾರ್ ಕಾರ್ಡ್‌ಗಳ ಅಪ್ಡೇಟ್ ಮಾಡಲು, ಹೊಸ ಆಧಾರ್ ಮಾಡಿಸಲು ಸೈಬರ್ ಸೆಂಟರ್ ಗಳು ಸರಕಾರಿ ಕಛೇರಿಗಳ ಮುಂದೆ ಮುಗಿ ಬೀಳುತ್ತಾರೆ. ಇದೀಗ ನಾಯಿಗಳಿಗೂ ಮುಂದಿನ ದಿನಗಳಲ್ಲಿ ಇಂತಹ ಪರಿಸ್ಥಿತಿ ಬಂದರೆ ಆಶ್ಚರ್ಯವಿಲ್ಲ. ಯಾಕಂದ್ರೆ ಇದೀಗ ನಾಯಿಗಳಿಗೂ ಆಧಾರ್ ಹೊಂದಿರಬೇಕು ಎನ್ನುವ ನಿಯಮ ಜಾರಿಗೆ ಬಂದಿದೆ.
ಈಗಾಗಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಾಯಿಗಳಿಗೆ ಆಧಾರ್ ಕಾರ್ಡ್ ನೀಡಲಾಗಿದೆಯಂತೆ. ಸರ್ವೆ ಪ್ರಕಾರ ಈಗಾಗಲೇ ದೆಹಲಿಯಲ್ಲಿ 100 ನಾಯಿಗಳಿಗೆ ಆಧಾರ್ ಕಾರ್ಡ್‌ಅನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ. ಈ 100 ನಾಯಿಗಳು ದೆಹಲಿಯ ಟರ್ಮಿನಲ್ 1 ವಿಮಾನ ನಿಲ್ದಾಣ, ಇಂಡಿಯಾ ಗೇಟ್ ಮತ್ತು ಪ್ರಾಣಿ ಕಾರ್ಯಕರ್ತೆ ಮಾನವಿ ರೈ ನಡೆಸುತ್ತಿರುವ ದೆಹಲಿಯ ನಾಯಿ ಆಶ್ರಯ ಸೇರಿದಂತೆ ವಿವಿಧ ಸ್ಥಳಗಳಿಗೆ ಸೇರಿವೆ ಎನ್ನಲಾಗಿದೆ. ದಾರಿ ತಪ್ಪಿದ ನಾಯಿಗಳನ್ನು ರಕ್ಷಿಸುವ ಹಾಗೂ ಅವುಗಳನ್ನು ಸ್ಥಳಾಂತರಿಸುವ ದೃಷ್ಟಿಯಲ್ಲಿ ಎನ್‌ಜಿಒ ಗಳು ಈ ನಿಯಮವನ್ನು ಜಾರಿಗೆ ತಂದಿದ್ದಾರೆ.
Pawfriend.in ಎಂಬ ಎನ್‌ಜಿಒ ಇದನ್ನು ಆವಿಷ್ಕಾರ ಮಾಡಿದ್ದು ನಾಯಿಗಳಿಗೆ ನೀಡುವ ಆಧಾರ್ ಕಾರ್ಡ್‌ನಲ್ಲಿ ಕ್ಯೂ ಆರ್ ಕೋಡ್‌ಅನ್ನು ಕೂಡಾ ಅಳವಡಿಸಿದ್ದಾರೆ. ಇದು ಮೈಕ್ರೋಚಿಪ್‌ಗಳನ್ನು ಒಳಗೊಂಡಿದ್ದು, ನಾಯಿಗಳು ಒಂದು ವೇಳೆ ಕಳೆದು ಹೋದಲ್ಲಿ ಈ ಟ್ಯಾಗ್‌ಗಳಲ್ಲಿರುವ ಕ್ಯೂಆರ್‌ಕೋಡ್ ಅನ್ನು ಸ್ಕ್ಯಾನ್ ಮಾಡಿದ್ರೆ ನಾಯಿಯ ಕುರಿತು ವಿವರಗಳನ್ನು ಪಡೆಯಬಹುದಾಗಿದೆ. ಇದು ನಾಯಿಯ ಯಜಮಾನನಿಗೆ ಬಹಳ ಸಹಾಯಕಾರಿಯಾಗಿದೆ.