May 3, 2026
WhatsApp Image 2026-05-03 at 5.20.45 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಬರುವ ದಿನಗಳಲ್ಲಿ ತಾಪಮಾನವು ಗಣನೀಯವಾಗಿ ಏರಿಕೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.

ನಿರ್ದಿಷ್ಟವಾಗಿ ಜಿಲ್ಲೆಯ ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯು ತನ್ನ ಮಾಸಿಕ ವರದಿಯಲ್ಲಿ, ಮೇ ತಿಂಗಳಲ್ಲಿ ದೇಶದ ಹಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿರಲಿದೆ ಎಂದು ಈ ಹಿಂದೆಯೇ ಸೂಚಿಸಿತ್ತು. ಆದರೆ, ವಾಯುವ್ಯ, ಮಧ್ಯ ಮತ್ತು ಈಶಾನ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿತ್ತು.

ಕಳೆದ ಕೆಲವು ದಿನಗಳಿಂದ ಕರಾವಳಿ ಪ್ರದೇಶಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಸಾಮಾನ್ಯವಾಗಿ ಇಲ್ಲಿನ ಹವಾಮಾನವು ಬೆಳಿಗ್ಗೆ ಮೋಡ ಕವಿದ ವಾತಾವರಣದೊಂದಿಗೆ ಪ್ರಾರಂಭವಾಗಿ, ದಿನ ಸೆಕೆ ಹಾಗೂ ಬಿಸಿಲಿನ ತಾಪ ಏರಿಕೆ ಕಾಣುತ್ತಿದೆ. ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಸಿಲಿನ ತೀವ್ರತೆ ಹೆಚ್ಚಾಗಿತ್ತು.

ಮಂಗಳೂರಿನಲ್ಲಿ 33.8 ಡಿ. ಸೆ. ಗರಿಷ್ಠ ತಾಪಮಾನ ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 0.5 ಡಿ. ಸೆ. ಕಡಿಮೆಯಾಗಿದೆ. ಇನ್ನು ಕನಿಷ್ಠ ತಾಪಮಾನವು 26.6 ಡಿ. ಸೆ. ಇದ್ದು, ಇದು ಸಾಧಾರಣಕ್ಕಿಂತ 1.3 ಡಿ. ಸೆ. ಹೆಚ್ಚಾಗಿದೆ. ಮುಂದಿನ ಎರಡು ದಿನಗಳಲ್ಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

About The Author

Leave a Reply

Your email address will not be published. Required fields are marked *

You cannot copy content of this page.