ಅಪ್ರಾಪ್ತ ಬಾಲಕಿ ಮೇಲೆ ಅಣ್ಣ, ಮೌಲ್ವಿಯಿಂದ ಅತ್ಯಾಚಾರ!

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮೌಲ್ವಿಯನ್ನು ಪೊಲೀಸರು ಬಂಧಿಸಿರುವ ಘಟನೆ  ಚಿತ್ರದುರ್ಗದಲ್ಲಿ ನಡೆದಿದೆ. ಸದ್ಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮಸೀದಿಗೆ ಕುರಾನ್‌ ಓದಲು ಬರುತ್ತಿದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮೌಲ್ವಿ ಅಬ್ದುಲ್‌ ರೆಹಮಾನ್‌ ನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಗೆ ದೆವ್ವ ಹಿಡಿದಿದೆ ಎಂದು ಬಾಲಕಿಯನ್ನು ರೂಮ್‌ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದ್ದು, ಸದ್ಯ ಪೊಲೀಸರು ಮೌಲ್ವಿಯನ್ನು ಬಂಧಿಸಿದ್ದಾರೆ.

ಬಾಲಕಿಗೆ ದೆವ್ವ ಹಿಡಿದಿದೆ, ಅದನ್ನು ಹೋಗಲಾಡಿಸುತ್ತೇನೆ ಎಂದು ಹೇಳಿ ಬಾಲಕಿ ಮನೆಗೆ ಹೋಗುತ್ತಿದ್ದ ಮೌಲ್ವಿ, ತಾಯಿಗೆ ಹೊರಗೆ ಇರುವಂತೆ ಹೇಳಿ ಬಾಲಕಿಯನ್ನು ರೂಮ್‌ ಗೆ ಕರೆದುಕೊಂಡು ಹೋಗುತ್ತಿದ್ದ ಮೌಲ್ವಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಜೊತೆಗೆ ಬಾಲಕಿ ಸಹೋದರನನ್ನು ಕರೆದುಕೊಂಡು ಹೋಗಿದ್ದು, ದೈಹಿಕವಾಗಿ ಸುಖ ಕೊಟ್ಟರೆ ಶಾಂತಿ ಸಿಗುತ್ತದೆ ಎಂದು ಹೇಳಿ ತಂಗಿಯ ಮೇಲೆ ಸಹೋದರಿನಿಂದ ಅತ್ಯಾಚಾರ ಮಾಡಿಸಿದ್ದಾನೆ. ಬಳಿಕ ಅತ್ಯಾಚಾರದ ವಿಡಿಯೋ ಮಾಡಿಕೊಂಡ ಮೌಲ್ವಿ ಸಂತ್ರಸ್ತ ಬಾಲಕಿ ಮೇಲೆ ಕಳೆದ ಆರು ತಿಂಗಳಿನಿಂದ ವಾರಕ್ಕೆ ಒಂದು ದಿನ ಲೈಂಗಿಕ ದೌರ್ಜನ್ಯ ನಡೆಸಿದಾನೆ. ಬಾಲಕಿ ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಬಾಲಕಿ ತಾಯಿ ಪ್ರಕರಣ ದಾಖಲಿಸಿದ್ದು, ಮೌಲ್ವಿ ಮೇಲೆ ಕೇಸ್‌ ದಾಖಲಾಗಿದೆ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.