ಚಾಕುವಿನಿಂದ ಇರಿದು ಪಿಯುಸಿ ವಿದ್ಯಾರ್ಥಿ ಬರ್ಭರವಾಗಿ ಹತ್ಯೆ..!

ಬೆಂಗಳೂರು: ನಗರದಲ್ಲಿ ಇಂದು ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಪಿಯುಸಿ ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಈ ಮೂಲಕ ರಾಜ್ಯ ರಾಜಧಾನಿ ಜನತೆ ಬೆಚ್ಚಿ ಬೀಳುವಂತೆ ಮಾಡಿದೆ.

ಬೆಂಗಳೂರಿನ ಮಂಜುನಾಥನಗರದಲ್ಲಿನ ಗೌತಮ್ ಕಾಲೇಜು ಬಳಿಯಲ್ಲಿ ಪಿಯು ವಿದ್ಯಾರ್ಥಿ ಸುಹೇಲ್(18) ಎಂಬಾತನನ್ನು ಚಾಕುನಿಂದ ಇರಿದು ಬರ್ಭರವಾಗಿ ಹತ್ಯೆ ಮಾಡಲಾಗಿದೆ.

ಹತ್ಯೆಗೊಳಗಾದಂತ ಸುಹೇಲ್ ಗೌತಮ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದನು ಎಂಬುದಾಗಿ ತಿಳಿದು ಬಂದಿದೆ. ವಿದ್ಯಾರ್ಥಿಯನ್ನು ಹತ್ಯೆ ಮಾಡಿದ್ದು ಯಾರು ಎನ್ನುವುದು ತಿಳಿದು ಬಂದಿಲ್ಲ. ಅಲ್ಲದೇ ಯಾವ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂಬುದು ತನಿಖೆಯ ನಂತ್ರ ತಿಳಿಯಬೇಕಿದೆ.

ವಿದ್ಯಾರ್ಥಿ ಹತ್ಯೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಬಸವೇಶ್ವರನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಮ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Check Also

ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ಸಾವು

ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ಇಂದು ಮೃತಪಟ್ಟ ಘಟನೆ ನಡೆದಿದೆ. ಸಾವನ್ನಪ್ಪಿದ ಜೈಲು …

Leave a Reply

Your email address will not be published. Required fields are marked *

You cannot copy content of this page.