ಹತ್ರಸ್ ಸತ್ಸಂಗ ಕಾಲ್ತುಳಿತ ದುರಂತ: ಮೃತದೇಹಗಳನ್ನು ಕಂಡು ಪೊಲೀಸ್ ಪೇದೆಗೆ ಹೃದಯಾಘಾತ

ದೆಹಲಿ : ಉತ್ತರ ಪ್ರದೇಶದ ಹತ್ರಾಸ್ ಸತ್ಸಂಗದ ವೇಳೆ ನೂಕುನುಗ್ಗಲು ಉಂಟಾಗಿ ಸ್ಥಳದಲ್ಲಿ ಬಿದ್ದಿದ್ದ 100ಕ್ಕೂ ಹೆಚ್ಚು ಮೃತ ದೇಹಗಳನ್ನು ಕಂಡು ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹತ್ರಾಸ್ ಜಿಲ್ಲೆಯ ಮುಘಲ್‌ಗರ್ಹಿ ಗ್ರಾಮದಲ್ಲಿ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದ ವೇಳೆ ನೂಕುನುಗ್ಗಲಿನಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ.

ಘಟನೆಯಲ್ಲಿ 28 ಮಂದಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶ ಪೊಲೀಸರು ಜು.03 ರಂದು ಘಟನೆ ಸಂಬಂಧ FIR ದಾಖಲಿಸಿದ್ದಾರೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಪೈಕಿ 19 ಮಂದಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಇದ್ದಾರೆ. ದುರಂತದಲ್ಲಿ ಕ್ವಿಕ್ ರೆಸ್ಪಾನ್ಸ್ ಟೀಮ್ ನಲ್ಲಿ ಕರ್ತವ್ಯ ನಿರ್ವಹಿಸಲು ಕಾನ್ ಸ್ಟೇಬಲ್ ರವಿ ಯಾದವ್ ಅವರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಅವರು ಮೃತ ದೇಹಗಳನ್ನು ಕಂಡು ಹೃದಯಾಘಾತದಿಂದ ಸಾವನ್ನಪ್ಪಿರುವುದು ವರದಿಯಾಗಿದೆ.

ಹತ್ರಾಸ್ ಸತ್ಸಂಗ ದುರಂತದಲ್ಲಿ ಮೃತರ ಶವಗಳ ಬಗ್ಗೆ ಮಾಹಿತಿ ನೀಡಲು ಕ್ವಿಕ್ ರೆಸ್ಪಾನ್ಸ್ ಟೀಮ್ ನಲ್ಲಿ ರವಿ ಯಾದವ್ ಅವರನ್ನು ನಿಯೋಜಿಸಲಾಗಿತ್ತು. ಆದರೆ ಕರ್ತವ್ಯದಲ್ಲಿದ್ದಾಗಲೇ ರವಿ ಯಾದವ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಘಟನೆ ಅತ್ಯಂತ ದುಃಖಕರ ಮತ್ತು ಹೃದಯವಿದ್ರಾವಕ – ಸಿಎಂ ಆದಿತ್ಯನಾಥ್

ಘಟನೆಯ ಬಗ್ಗೆ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿ ಸಂತಾಂಪ ಸೂಚಿಸಿದ್ದಾರೆ. ಘಟನೆ ದುಃಖಕರ ಮತ್ತು ಹೃದಯ ವಿದ್ರಾವಕವಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಇಡೀ ಪ್ರಕರಣದ ತನಿಖೆಗೆ ಡಿಜಿ ಆಗ್ರಾ ಅವರ ಅಧ್ಯಕ್ಷತೆಯಲ್ಲಿ ತಂಡವನ್ನು ರಚಿಸಲಾಗಿದೆ ಮತ್ತು ವರದಿಯನ್ನು ನೀಡುವಂತೆ ಕೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಕೂಡ ಈ ಘಟನೆಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡಿರುವ ನಾಗರಿಕರಿಗೆ ತಲಾ 50 ಸಾವಿರ ರೂಪಾಯಿ ನೆರವು ಘೋಷಿಸಲಾಗಿದೆ.

ಸಹಾಯವಾಣಿ ಸಂಖ್ಯೆ ಬಿಡುಗಡೆ

ಹತ್ರಾಸ್ ಜಿಲ್ಲಾಡಳಿತ ಜನರಿಗೆ ಸಹಾಯ ಮಾಡಲು ಸಹಾಯವಾಣಿ ಸಂಖ್ಯೆ 05722227041, 05722227042 ಅನ್ನು ಬಿಡುಗಡೆ ಮಾಡಿದೆ.

ಸಂಘಟಕರ ವಿರುದ್ಧ ಎಫ್‌ಐಆರ್

ಹತ್ರಾಸ್ ಸತ್ಸಂಗ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ ಪೊಲೀಸರು ಸತ್ಸಂಗ ಸಂಘಟಕರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ನಿರೀಕ್ಷೆಗೂ ಹೆಚ್ಚು ಮಂದಿ ಸತ್ಸಂಗಕ್ಕೆ ಬಂದಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಸಂಘಟಕರು ಬೇಕಾದ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ ಈ ದರ್ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.

ಸಿಎಂ ಯೋಗಿ ಆದಿತ್ಯನಾಥ್ ಇಂದು ಹತ್ರಾಸ್‌ಗೆ ಭೇಟಿ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಹತ್ರಾಸ್‌ಗೆ ಭೇಟಿ ನೀಡಿ ಘಟನಾ ಸ್ಥಳವನ್ನು ಪರಿಶೀಲಿಸಲಿದ್ದು, ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ. ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಇಂದು (ಮಂಗಳವಾರ) ಹತ್ರಾಸ್‌ನಲ್ಲಿ ವಾಸ್ತವ್ಯ ಹೂಡಿ ಸಿಎಂಗೆ ವೀಕ್ಷಣಾ ವರದಿ ನೀಡಲಿದ್ದಾರೆ.

Check Also

ಬಂಟ್ವಾಳ: ಮಧ್ಯರಾತ್ರಿ ರಿಕ್ಷಾ ನಿಲ್ಲಿಸಿ ನಾಪತ್ತೆ! ದರ್ಶನ ಪಾತ್ರಿ ನದಿಗೆ ಹಾರಿರುವ ಶಂಕೆ|

ಬಂಟ್ವಾಳ : ಕುಕ್ಕಿಪಾಡಿ ಗ್ರಾಮದ ನಿವಾಸಿ ದರ್ಶನ ಪಾತ್ರಿ ಗಿರೀಶ್ ಎಂಬವರು ಕಾಣೆಯಾಗಿದ್ದಾರೆ ಎಂಬ ದೂರು ಪೂಂಜಲ್‌ಕಟ್ಟೆ ಠಾಣೆಯಲ್ಲಿ ಪ್ರಕರಣ …

Leave a Reply

Your email address will not be published. Required fields are marked *

You cannot copy content of this page.