March 14, 2026
WhatsApp Image 2023-08-03 at 1.16.42 PM

ಮೂಡುಬಿದಿರೆ: ಮಂಗಳೂರು ಹೊರವಲಯದ ಮುಲ್ಕಿ ಠಾಣಾ ವ್ಯಾಪ್ತಿಯ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿ ಐಕಳ ಹರೀಶ್ ಶೆಟ್ಟಿ ಎಂಬವರ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನ ಬೆಳ್ಳಿ ಆಭರಣ ಹಾಗೂ ನಗದನ್ನು ಕಳವು ಗೈದ ಪ್ರಕರದ ಆರೋಪಿಗೆ ನ್ಯಾಯಾಲಯ ಷರುತ್ತುಬದ್ದ ಜಾಮೀನು ಮಂಜೂರು ಮಾಡಿದೆ.

ಕಳೆದ ಜನವರಿ ತಿಂಗಳಲ್ಲಿ ಹರೀಶ್ ಐಕಳ ಶೆಟ್ಟಿಯವರ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಅರ್ಧ ಕಿಲೋ ಬಂಗಾರ ಸಹಿತ ಬೆಳ್ಳಿ ಆಭರಣಗಳನ್ನು ಕಳವುಗೈದಿದ್ದರು. ಗಂಭೀರ ಪ್ರಕರಣವಾಗಿದ್ದ ಕಾರಣ ಮಂಗಳೂರು ಸಿಸಿಬಿ ಪೊಲೀಸರಿಗೆ ಪ್ರಕರಣದ ತನಿಖೆ ವರ್ಗಾವಣೆಗೊಂಡಿತ್ತು.

ಸಿಸಿಬಿ ಪೊಲೀಸರು ಕಳೆದ ತಿಂಗಳು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಇಬ್ಬರು ಆರೋಪಿಗಳ ಜಾಮೀನು ಮೂಡುಬಿದಿರೆ ನ್ಯಾಯಾಲಯ ಮತ್ತು ಜಿಲ್ಲಾ ನ್ಯಾಯಾಲಯದಲ್ಲಿ ತಿರಸ್ಕೃತಗೊಂಡಿತ್ತು.

ಇತ್ತೀಚೆಗೆ ಮೂರನೇ ಆರೋಪಿ ಮಹಮ್ಮದು ಶರೀಫ್ ಎಂಬಾತನ್ನು ಬಂದಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಶರೀಫ್‌ಗೆ ಮೂಡುಬಿದಿರೆ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

ಆರೋಪಿ ಶರೀಫ್ ಪರವಾಗಿ ಮಂಗಳೂರು ವಕೀಲರಾದ ವೇಣುಕುಮಾರ್, ಯುವರಾಜ್ ಮತ್ತು ಮೂಡುಬಿದಿರೆ ವಕೀಲರಾದ ವೇಣುಗೋಪಾಲ್ ವಾದಿಸಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.