ಮಂಗಳೂರು: ಕ್ರಿಕೆಟ್ ಆಡುತ್ತಿರುವಾಗಲೇ ಹೃದಯಾಘಾತ; ಯುವಕ ಸಾವು

ಮಂಗಳೂರು: ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಯುವಕನೋರ್ವ ಸಾವನ್ನಪ್ಪಿದ ಘಟನೆ ಮೂಡುಪೆರಾರ ಕಾಯರಾಣೆಯಲ್ಲಿ ಸೆಪ್ಟೆಂಬರ್ 1 ರಂದು ನಡೆದಿದೆ.

ಮೂಡುಪೆರಾರ ಕಾಯರಾಣೆ ನಿವಾಸಿ ದಿ| ಆನಂದ ಪೂಜಾರಿ ಅವರ ಪುತ್ರ ಪ್ರದೀಪ್ ಪೂಜಾರಿ (31) ಮೃತ ದುರ್ದೈವಿ.

ಭಾನುವಾರ ಸಂಜೆ ಮೂಡುಪೆರಾರ ಕಾಯಾರಣೆಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಪ್ರದೀಪ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಮೊದಲಿಗೆ ಕೈಕಂಬದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ನಂತರ ಬಜ್ಪೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಪ್ರದೀಪ್ ಪಡುಪೆರಾರ ಗ್ರಾಮ ಪಂಚಾಯತ್ ಉದ್ಯೋಗಿಯಾಗಿದ್ದು, ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯಾಭಿವೃದ್ಧಿ ಸಂಘದ ಮಂಗಳೂರು ತಾಲೂಕು ಸಮಿತಿಯ ಅಧ್ಯಕ್ಷರಾಗಿದ್ದರು. 2012ರಲ್ಲಿ ಪಡುಪೆರಾರ ಗ್ರಾಮ ಪಂಚಾಯಿತಿಗೆ ಸೇರಿದ ಪ್ರದೀಪ್, ಕಾಯರಣೆ ನವರಂಗ ಗೆಳೆಯರ ಬಳಗದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದು, ಬಜರಂಗದಳ ಹಾಗೂ ಜವನೆರ್ ಪೆರಾರ್ ಕಾರ್ಯಕರ್ತರಾಗಿದ್ದರು.

Check Also

ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು

ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ …

Leave a Reply

Your email address will not be published. Required fields are marked *

You cannot copy content of this page.