ನವದೆಹಲಿ: ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ಎಎಲ್‌ಎಚ್) ಹೆಲಿಕಾಪ್ಟರ್ ನಾಲ್ಕು ಸಿಬ್ಬಂದಿಯೊಂದಿಗೆ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಓರ್ವ ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ಉಳಿದ ಮೂವರು ಸಿಬ್ಬಂದಿಗಾಗಿ ಶೋಧ ಕಾರ್ಯ ಪ್ರಗತಿಯಲ್ಲಿದೆ.
ಹೆಲಿಕಾಪ್ಟರ್ ಅವಶೇಷಗಳು ಪತ್ತೆಯಾಗಿವೆ. ಹೆಲಿಕಾಪ್ಟರ್ ಹಡಗನ್ನು ಸಮೀಪಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಎನ್ನಲಾಗಿದೆ ಪ್ರಸ್ತುತ, ಐಸಿಜಿ ಶೋಧ ಕಾರ್ಯಾಚರಣೆಗಾಗಿ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳನ್ನು ಕಾರ್ಯಚರಣೆಗೆ ಇಳಿಸಲಾಗಿದೆ ಅಂಥ ತಿಳಿದು ಬಂದಿದೆ.