ಕಾಪು: ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮನೆ ಮಂದಿಯ ಸಂಪೂರ್ಣ ವಿವರಗಳನ್ನು ಸಂಗ್ರಹಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿದ್ದು, ಈ ಕುರಿತು ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಾಹಿತಿ ಸಂಗ್ರಹ ಕುರಿತ ಆರೋಪದ ವಿಡಿಯೋವೊಂದು ವೈರಲ್ ಆಗಿದೆ.ಉಚ್ಚಿಲದಲ್ಲಿ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಮನೆಮಂದಿಯ ಸಂಪೂರ್ಣ ಮಾಹಿತಿ ಕೇಳಿದ್ದಾರೆ.ವೈಯಕ್ತಿಕವಾಗಿ ಪಾಸ್‌ಪೋರ್ಟ್ ಹಾಗೂ ಬ್ಯಾಂಕ್ ಖಾತೆಗಳ ಮಾಹಿತಿ ಕೇಳಿರುವ ಆರೋಪ ಕೇಳಿ ಬಂದಿದೆ.ಸಂಶಯ ಬಂದು ಮಾಹಿತಿ ನೀಡಲು ಹಿಂದೇಟು ಹಾಕಿದಾಗ ಪೊಲೀಸರು ಬಂದು ಮಾಹಿತಿ ಕಲೆ ಹಾಕುತ್ತಾರೆಂದು ಬೆದರಿಸಿರುವ ಆರೋಪ ಕೂಡ ಮಾಡಲಾಗಿದೆ.
ಈ ಸಂಬಂಧ ಸ್ಥಳೀಯ ಗ್ರಾಪಂ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿದ್ದಾರೆ. ಅವರು ಯಾವುದೇ ಮಾಹಿತಿ ಸಂಗ್ರಹಕ್ಕೆ ಸೂಚಿಸಿಲ್ಲ ಎಂದು ಉತ್ತರ ನೀಡಿದ್ದಾರೆ.ಹಾಗಾದರೆ ಇವರು ಸಂಗ್ರಹಿಸಿರುವ ಮಾಹಿತಿ ಯಾರಿಗೆ ಹೋಗುತ್ತದೆ? ಎಂದು ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಅವರು
ಕೂಡ ಮಾಹಿತಿ ಸಂಗ್ರಹಕ್ಕೆ ಸೂಚಿಸಿಲ್ಲ ಎಂದು ಹೇಳಿದ್ದಾರೆ.
ಇದರಿಂದ ಆಶಾ ಕಾರ್ಯಕರ್ತರಿಗೆ ಮಾಹಿತಿ ಸಂಗ್ರಹಕ್ಕೆ ಸೂಚಿಸಿದವರು ಯಾರು ಎಂದು ಮಹಿಳೆ ವೈರಲ್ ವಿಡಿಯೋದಲ್ಲಿ ಪ್ರಶ್ನಿಸಿದ್ದಾರೆ.ಇದರ ಬೆನ್ನಲ್ಲೇ ಅನದೀಕೃತ ಮಾಹಿತಿ ಸಂಗ್ರಹ ಅಭಿಯಾನ ನಿಲ್ಲಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.