ಉಡುಪಿ: ಸುರತ್ಕಲ್ ಟೋಲ್ ಗೇಟ್ ರದ್ದುಗೊಳಿಸಿ, ಅಲ್ಲಿನ ಶುಲ್ಕವನ್ನು ಹೆಜಮಾಡಿ ಟೋಲ್‌ನಲ್ಲಿ ವಿಲೀನಗೊಳಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾಡಳಿತವು ಹೆಜಮಾಡಿ ಟೋಟ್ ದರ ಪರಿಷ್ಕರಣೆ ಸಂಬಂಧ ಡಿ.3ರ ಬೆಳಗ್ಗೆ 9ಕ್ಕೆ ತಾ.ಪಂ. ಕಚೇರಿಯಲ್ಲಿ ಜನ ಪ್ರತಿನಿಧಿಗಳ ಸಭೆ ನಡೆಸಲಿದೆ. ಈ ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಧಾರದಂತೆ ಟೋಲ್ ದರ ಪರಿಷ್ಕರಣೆಯಾಗುವ ಸಾಧ್ಯತೆಯೂ ಇದೆ. ಸಭೆಯಲ್ಲಿ ಸಚಿವ ಸುನಿಲ್ ಕುಮಾರ್, ರಾಜ್ಯ ಹಿಂದುಳಿದ ವರ್ಗ ಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಎಸ್ಪಿ ಹಾಕೆ ಅಕ್ಷಯ್ ಮಚೀಂದ್ರ, ಜಿಲ್ಲೆಯ ಶಾಸಕರು,ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.