ಬಂಟ್ವಾಳ: ವಧೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಜಾನುವಾರವೊಂದನ್ನು ರಕ್ಷಣೆ ಮಾಡಿದ ಭಜರಂಗದಳದ ಕಾರ್ಯಕರ್ತರು ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳದಲ್ಲಿ ನಡೆದಿದೆ.
ಭಜರಂಗದಳ ಕಲ್ಲಡ್ಕ ಪ್ರಖಂಡದ ಕಾರ್ಯಕರ್ತರು ಈ ಕಾರ್ಯಾಚರಣೆಯನ್ನು ನಡೆಸಿದ್ದು ಮ್ಯಾಕ್ಸಿಂ ಹಾಗೂ ವಿಶ್ವನಾಥ ಬಾಳ್ತಿಲ ಎಂಬವರನ್ನು ಹಿಡಿದು ಪೋಲೀಸರಿಗೊಪ್ಪಿಸಿದ್ದಾರೆ.
ಇಲ್ಲಿನ ಮೆಲ್ಕಾರ್ ಸಮೀಪದ ಕಂದೂರು ಎಂಬಲ್ಲಿ ಪಿಕಪ್ ವಾಹನದಲ್ಲಿ ದನವೊಂದನ್ನು ವದೆ ಮಾಡುವ ಉದ್ದೇಶದಿಂದ ಅಪೆ ರಿಕ್ಷಾದಲ್ಲಿ ಸಾಗಿಸುವ ಬಗ್ಗೆ ಖಚಿತ ಮಾಹಿತಿ ಪಡೆದ ದಾಳಿ ನಡೆಸಿ ಕಾರ್ಯಕರ್ತರು ಜಾನುವಾರುವನ್ನು ರಕ್ಷಣೆ ಮಾಡಿ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.