December 5, 2025
WhatsApp Image 2025-12-03 at 9.36.01 AM

ಉಡುಪಿ ಜಿಲ್ಲೆಯಾದ್ಯಂತ ಸಂಚಾರ ವ್ಯವಸ್ಥೆಯನ್ನು ಆಧುನೀಕರಣಗೊಳಿಸಲು ಯೋಜನೆ ಹಾಕಿಕೊಂಡಿದ್ದು, ಈ ನಿಟ್ಟಿನಲ್ಲಿ ಆರ್ಟಿಫಿಶಲ್ ಇಂಟೆಲಿಜೆನ್ಸ್ ಟ್ರಾಫಿಕ್ ಸಿಸ್ಟಮ್ ಮೂಲಕ ದಂಡ ವಿಧಿಸುವ ಹಾಗೂ ವೇಗ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕ ಹರಿರಾಂ ಶಂಕ‌ರ್ ತಿಳಿಸಿದ್ದಾರೆ.

 

 

ಮಣಿಪಾಲದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಡುಪಿ ನಗರದಲ್ಲಿ ಸಂಚಾರಕ್ಕೆ ಸಂಬಂಧಿಸಿ ಸಿಸಿ ಕ್ಯಾಮೆರಾ ಅಳವಡಿಸುವ ಸಂಬಂಧ ಮೂರು ಪ್ರಾಜೆಕ್ಟ್‌ಗಳಿಗೆ ಸರಕಾರದಿಂದ ಅನುದಾನ ಬಿಡುಗಡೆಯಾಗಿದೆ. ಇಂಟೆಲಿಜೆನ್ಸ್ ಟ್ರಾಫಿಕ್ ಮ್ಯಾನೆಜ್‌ಮೆಂಟ್ ಸಿಸ್ಟಮ್ ನಡಿ ಏಳು ಜಂಕ್ಷನ್‌ಗಳಲ್ಲಿ 14 ಕ್ಯಾಮೆರಾಗಳನ್ನು ಆಳವಡಿಸಲು ಉದ್ದೇಶಿಸಲಾಗಿದೆ. ಅದೇ ರೀತಿ ನಗರಸಭೆಯ 50ಲಕ್ಷ ರೂ. ಅನುದಾನದಲ್ಲಿ ನಾಲ್ಕು ಜಂಕ್ಷನ್‌ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಉದ್ದೇಶಿಸಲಾಗಿದೆ ಎಂದರು.

ಈ ಕ್ಯಾಮೆರಾಗಳ ಮೂಲಕ ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳಿಗೆ ದಂಡ ವಿಧಿಸಲಾಗುವುದು. ದಂಡದ ನೋಟೀಸ್ ನೇರವಾಗಿ ಅವರ ಮನೆಗಳಿಗೆ ಕಳುಹಿಸುವ ವ್ಯವಸ್ಥೆ ಆರಂಭಿಸಲಾಗುವುದು. ಹೀಗೆ ಎಲ್ಲ ವ್ಯವಸ್ಥೆಯನ್ನು ಅಟೋಮೆಟಿಕ್ ಮಾಡಲಾಗುವುದು. ಇನ್ನು ಟ್ರಾಫಿಕ್ ಪೊಲೀಸರು ನಿಂತು ದಂಡ ವಿಧಿಸುವ ಕ್ರಮವನ್ನು ಕ್ರಮೇಣ ಕಡಿಮೆ ಮಾಡಲಾಗುವುದು ಎಂದು ಅವರು ಹೇಳಿದರು.

ಇದೇ ಯೋಜನೆಗೆ ಉಡುಪಿ ನಗರಸಭೆಯಿಂದ 50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಆ ಹಣದಲ್ಲಿ ನಗರಸಭೆ ವ್ಯಾಪ್ತಿಯ 3-4 ಜಂಕ್ಷನ್‌ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗುವುದು. ಇದು ಕೂಡ ಆರ್ಟಿಫಿಶಲ್ ಇಂಟೆಲಿಜೆನ್ಸ್ ಸಿಸ್ಟಮ್ ಮಾದರಿಯಲ್ಲಿ ಕಾರ್ಯನಿರ್ವಹಿಸಲಿದೆ. ಇದರಿಂದ ನಗರ ಮತ್ತು ಜಿಲ್ಲಾ ಗಡಿ ಪ್ರದೇಶದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದವರನ್ನು ಕ್ಯಾಮೆರಾ ಮೂಲಕ ಪತ್ತೆ ಹಚ್ಚಿ ದಂಡ ವಿಧಿಸಲು ಅನುಕೂಲವಾಗುತ್ತದೆ ಎಂದು ಎಸ್ಪಿ ತಿಳಿಸಿದರು.

About The Author

Leave a Reply

Your email address will not be published. Required fields are marked *

You cannot copy content of this page.