ಕೊಟ್ಟಾಯಂನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್‌ಯೊಬ್ಬರು ಚಿಕನ್ ಡಿಶ್ ‘ಅಲ್ ಫಹಮ್’ ನ್ನು ಸೇವಿಸಿದ ಬಳಿಕ ಗಂಭೀರವಾಗಿ ಬಳಿಕ ಮೃತಪಟ್ಡಿದ್ದಾರೆ.
ಘಟನೆ ನಡೆದ ಬೆನ್ನಲ್ಲೇ ಕೇರಳದ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಮಂಗಳವಾರ 40 ಹೋಟೆಲ್‌ಗಳನ್ನು ಬಂದ್ ಮಾಡಿ, 62 ಮಂದಿಗೆ ದಂಡ ವಿಧಿಸಿದ್ದಾರೆ.
ರಾಜ್ಯಾದ್ಯಂತ ಹೋಟೆಲ್‌ಗಳ ಮೇಲೆ ದಾಳಿ ನಡೆಸಿ 28 ಮಂದಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
33 ವರ್ಷದ ನರ್ಸ್ ರೇಶ್ಮಿ ರಾಜ್ ಅರೇಬಿಯನ್ ಚಿಕನ್ ಡಿಶ್ ‘ಅಲ್ ಫಹಮ್’ನ್ನು ಹೊಟೇಲ್ ನಿಂದ ತರಿಸಿ ತಿಂದ ನಂತರ ಅವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ಸೋಮವಾರ ಮೃತಪಟ್ಟಿದ್ದರು.
ಅದೇ ಹೋಟೆಲ್‌ನಲ್ಲಿ ಊಟ ಮಾಡಿದ ಇತರ 20 ಜನರು ವಿವಿಧ ಆಸ್ಪತ್ರೆಗಳಲ್ಲಿ ವೈದ್ಯಕೀಯ ನೆರವು ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಹಾರ ಸುರಕ್ಷತಾ ಅಧಿಕಾರಿಗಳು ಹೋಟೆಲ್‌ನ ಪರವಾನಗಿಯನ್ನು ಅಮಾನತುಗೊಳಿಸಿದ್ದಾರೆ ಮತ್ತು ಅದನ್ನು ಮುಚ್ಚಲು ಆದೇಶಿಸಿದ್ದಾರೆ.
ಕೆಲವು ವಿದೇಶಿ ಖಾದ್ಯಗಳ ಜೊತೆಗೆ ಸೇವಿಸುವ ಹಳಸಿದ ‘ಮೇಯನೇಸ್’ ಸುಲಭವಾಗಿ ವಿಷವಾಗಿ ಪರಿವರ್ತನೆಯಾಗುತ್ತದೆ ಎಂದು ಅಧಿಕಾರಿಗಳು ಕಂಡು ಕೊಂಡಿದ್ದಾರೆ.