ಉತ್ತರಪ್ರದೇಶ: ಮುಂದಿನ ಶೈಕ್ಷಣಿಕ ಅವಧಿಯಲ್ಲಿ ಮದರಸಾಗಳಲ್ಲಿ ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನು ಅಳವಡಿಕೆ ಮಾಡುವುದಾಗಿ ಮದರಸಾ ಶಿಕ್ಷಣ ಮಂಡಳಿಯ ಅಧ್ಯಕ್ಷರಾದ ಇಫ್ತೀಕರ್ ಅಹ್ಮದ್ ಜಾವೇದ್ ಅವರು ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಆಧುನಿಕ ಶಿಕ್ಷಣವನ್ನೂ ಒದಗಿಸಲಾಗುವುದು ಎಂದು ಹೇಳಿದ ಅವರು
ಈಗ ಮದರಸಾ ಮಕ್ಕಳು ಕೂಡ ಕಂಪ್ಯೂಟರ್, ಗಣಿತ, ವಿಜ್ಞಾನ ಶಿಕ್ಷಣ ಪಡೆಯಬಹುದು ಎಂದು ಹೇಳಿದ್ದಾರೆ. ಇದಕ್ಕೆ ಮೊದಲು ಉತ್ತರಾಖಂಡ ರಾಜ್ಯದಲ್ಲಿ ವಕ್ಫ್ ಮಂಡಳಿಯು 103 ಮದರಸಾಗಳಲ್ಲಿ ಎನ್‌ಸಿಇಆರ್‌ಟಿ ಪಠ್ಯಕ್ರಮ ಪರಿಚಯಿಸಿತ್ತು.