

ಉಡುಪಿ : ಕರಾವಳಿ ಕರ್ನಾಟಕ ಭಾಗದಲ್ಲಿ ನಾಳೆ ಬೆಳಗ್ಗಿನವರೆಗೂ ಭಾರೀ ಮಳೆಯ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜುಲೈ 5ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದ.ಕ., ಉಡುಪಿ, ಉತ್ತರ ಕನ್ನಡದಲ್ಲಿ ಜುಲೈ 5ರ ಬೆಳಗ್ಗೆ 8.30 ತನಕ ರೆಡ್ ಅಲರ್ಟ್ ,ಬಳಿಕ ಜುಲೈ 6ರ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 8ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.