March 14, 2026
WhatsApp Image 2023-08-04 at 4.14.37 PM

ಬೆಂಗಳೂರು: ನಗರದ ಖಾಸಗಿ ಶಾಲೆಯ ಪ್ರಾಂಶುಪಾಲನೊಬ್ಬ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ವರ್ತೂರು ಸಮೀಪದ ಶಾಲೆಗೆ ಬಾಲಕಿ ಎಂದಿನಂತೆ ತೆರಳಿ ಮನೆಗೆ ವಾಪಸ್ ಆಗಿದ್ದಳು. ಮನೆಗೆ ಮರಳಿದ ವೇಳೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ವಿಪರೀತ ನೋವಿನಿಂದ ಬಳಲಿದ ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ತಪಾಸಣೆ ನಡೆಸಿದ ವೈದ್ಯರು ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಡಿಸಿದ್ದಾರೆ ಎಂದು ಪೋಷಕರು ಹೇಳಿದ್ದಾರೆ. ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ ಶಾಲಾ ಸಂಸ್ಥಾಪಕ ಮತ್ತು ಪ್ರಾಂಶುಪಾಲನೇ ಆಕೆಯನ್ನು ಖಾಲಿ ರೂಮಿಗೆ ಕರೆದೊಯ್ದು ಕೃತ್ಯ ಎಸಗಿರುವುದಾಗಿ ತಿಳಿಸಿದ್ದಾಳೆ. ಈ ಸಂಬಂಧ ವರ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.