
ಕುಂದಾಪುರ: ಸ್ಕೂಟರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಯಾತ್ರೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲಾಧಾರಿಯೊಬ್ಬರು ಮೃತಪಟ್ಟ ಘಟನೆ ತೆಕ್ಕಟ್ಟೆ ಸಮೀಪದ ಕಣ್ಣುಕೆರೆ ಎಂಬಲ್ಲಿ ನ.2ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಕೋಟೇಶ್ವರ ಸಮೀಪದ ಕುಂಬ್ರಿ ನಿವಾಸಿ ಸುರೇಂದ್ರ ಮೊಗವೀರ (35) ಎಂದು ಗುರುತಿಸಲಾಗಿದೆ. ಇವರು ಮುಂಜಾನೆ ೫.೩೦ರ ಸುಮಾರಿಗೆ ೧೫ ಮಂದಿ ಅಯ್ಯಪ್ಪ ಮಾಲಾಧಾರಿಗಳೊಂದಿಗೆ ಕೋಟೇಶ್ವರ ಮಾರ್ಗವಾಗಿ ಅಯ್ಯಪ್ಪ ಸ್ವಾಮಿ ಶಿಬಿರದಿಂದ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದರು.
ಈ ವೇಳೆ ಹಿಂದಿನಿAದ ಬಂದ ಸ್ಕೂಟರ್, ಸುರೇಂದ್ರ ಹಾಗೂ ಇನ್ನೋರ್ವ ವೃತಧಾರಿಗೆ ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಸವಾರ ಸೇರಿದಂತೆ ಮೂವರು ರಸ್ತೆ ಬಿದ್ದು ಗಾಯಗೊಂಡರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಸುರೇಂದ್ರ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
