ಬೆಳ್ಳಂ ಬೆಳಗ್ಗೆ ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ : 6 ಮಂದಿ ದುರ್ಮರಣ

ಬೆಳಗಾವಿಯ : ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಜನ ಮೃತಪಟ್ಟ ಘಟನೆ ನಡೆದಿದೆ.

ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ಮೃತಪಟ್ಟ ಘಟನೆ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ನಡೆದಿದೆ.

ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಹನುಮವ್ವ, ದೀಪಾ, ಸುಪ್ರಿತಾ, ಮಾರುತಿ, ಇಂದಿರವ್ವ ಸೇರಿ ಆರು ಮಂದಿ ಮೃತಪಟ್ಟಿದ್ದಾರೆ. ಸವದತ್ತಿ ಯಲ್ಲಮನ ದರ್ಶನಕ್ಕೆ ಹೊರಟಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Check Also

ಕುಂದಾಪುರ : ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ

ಕುಂದಾಪುರ : ಕಳೆದ ಬುಧವಾರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಸಮುದ್ರ ತೀರದಲ್ಲಿ ಮುಳುಗಿ ನಾಪತ್ತೆಯಾಗಿದ್ದ ತುಮಕೂರು ಮೂಲದ …

Leave a Reply

Your email address will not be published. Required fields are marked *

You cannot copy content of this page.