ಧರ್ಮಸ್ಥಳಕ್ಕೆ ಹೊರಟಿದ್ದ ಯುವಕರ ಬೈಕ್ ಮೋರಿಗೆ ಡಿಕ್ಕಿ – ಇಬ್ಬರು ಸಾವು

ಸುಳ್ಯ ಸಮೀಪ ಸಂಪಾಜೆ ರಸ್ತೆ ಬದಿಯ ಮೋರಿಗೆ ಬೈಕ್ ಢಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಛೇರಿ ಬಳಿ ರಾತ್ರಿ ಸಂಭವಿಸಿದೆ.
ಸಾವನ್ನಪ್ಪಿದ ಯುವಕರು ಮೈಸೂರಿನಿಂದ ಧರ್ಮಸ್ಥಳಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ಮೈಸೂರು ಮೂಲದ ಪವನ್ ಹಾಗೂ ಮನೋಜ್ ಎಂದು ತಿಳಿಯಲಾಗಿದೆ.
ರಾತ್ರಿ ವೇಳೆ ಕೊಯಾನಾಡಿನ ಫಾರೆಸ್ಟ್ ಐ ಬಿ ಬಳಿ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಮೋರಿಗೆ ಬೈಕ್ ಡಿಕ್ಕಿ ಹೊಡೆದಿದೆ.ಇಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

Check Also

ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು

ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತಿ ಭಂಗ …

Leave a Reply

Your email address will not be published. Required fields are marked *

You cannot copy content of this page.