ಮಂಗಳೂರು:ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ,ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ. ಮೂಡುಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ ಕಡೆಯಿಂದ ಹೋಗುತ್ತಿದ್ದ ಲಾರಿ ನಡುವೆ ಇಳಿಜಾರು ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆ ಬದಿಯ ಹೊಂಡಕ್ಕೆ ಇಳಿದು ನಿಂತ ಪರಿಣಾಮ ಚಾಲಕರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.