May 15, 2025
WhatsApp Image 2023-11-17 at 4.06.22 PM

ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ರೂ.

ನೀಡಲಾಗುತ್ತಿದ್ದು, ಯಾರ ಖಾತೆಗೆ ಹಣ ಬಂದಿಲ್ಲ ಅವರು ತಪ್ಪದೇ ಈ ಕೆಲಸಗಳನ್ನು ಮಾಡಿ.

1) ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿ

ಗೃಹಲಕ್ಷ್ಮಿ ತಾಂತ್ರಿಕ ದೋಷ ನಿವಾರಣೆಗಾಗಿ ಮನೆಬಾಗಿಲಲ್ಲಿ ದಾಖಲೆ ಸಂಗ್ರಹಕ್ಕೆ ಇಲಾಖೆ ಸಿದ್ದವಾಗಿದೆ. ಗ್ರಾಮ-ಗ್ರಾಮಗಳಲ್ಲಿ ಅದಾಲತ್ ಗೆ ಇಲಾಖೆ ಸಿದ್ದವಾಗಿದ್ದು, ಅದಾಲತ್ ಗೂ ಮುನ್ನಾ ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ತೆರಳಿ, ತಾಂತ್ರಿಕ ದೋಷಗಳ ಕಾರಣ ಹುಡುಕಿ ಪೂರಕ ದಾಖಲೆ ಸಂಗ್ರಹಿಸಲಿದ್ದಾರೆ.

2) ಇ-ಕೆವೈಸಿ ಅಪ್ಡೇಟ್

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಇ-ಕೆವೈಸಿ ಅಪ್ಡೇಟ್ ಮಾಡಿಸಲು ಸೂಚನೆ ನೀಡಲಾಗಿದೆ.ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ – 2023 ರಿಂದ ಮಾಹೆಯಾನ 2000 ರೂ.ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ.

3) ಎಸ್ ಎಂ ಎಸ್ ನಂಬಿ ಕೂರಬೇಡಿ, ಬ್ಯಾಂಕ್ ಗೆ ಹೋಗಿ ಚೆಕ್ ಮಾಡಿ

ಯಜಮಾನಿಯರ ಪೆಂಡಿಂಗ್ ಹಣವನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಹಲವರ ಖಾತೆಗೆ ಹಣ ಜಮಾ ಆಗಿದೆ. ನಿಮ್ಮ ಬ್ಯಾಂಕ್ ಖಾತೆ ಅಥವಾ ಪೋಸ್ಟ್ ಆಫೀಸ್ ನಲ್ಲಿ ಚೆಕ್ ಮಾಡಿಕೊಳ್ಳಿ. ನಮಗೆ ಎಸ್ ಎಂ ಎಸ್ ಬಂದಿಲ್ಲ..ಹಣ ಬಂದಿರುತ್ತಾ..? ಎಂಬ ಅನುಮಾನವಿದ್ದರೆ..ಅದು ತಾಂತ್ರಿಕ ಸಮಸ್ಯೆಗಳಿಂದ ಎಸ್ ಎಂ ಎಸ್ ಬರದೇ ಇರಬಹುದು.ನೀವು ಬ್ಯಾಂಕ್ ಗೆ ಹೋಗಿ ಖಾತೆ ಪರಿಶೀಲಿಸಿಕೊಳ್ಳಬಹುದು.

4) ಖಾತೆ ಆಯಕ್ಟಿವ್ ಇದೆಯೋ ಇಲ್ಲವಾ ಪರಿಶೀಲಿಸಿ

ಯಜಮಾನಿಯರ ಬ್ಯಾಂಕ್ ಖಾತೆಯಲ್ಲಾದ ಹಲವು ತಾಂತ್ರಿಕ ದೋಷಗಳು ಹಾಗೂ ಕೆಲವು ತಾಂತ್ರಿಕ ತೊಂದರೆಗಳಿಂದ ಇನ್ನೂ ಕೆಲವು ಯಜಮಾನಿಯರ ಖಾತೆಗೆ ಹಣ ಬಂದಿಲ್ಲ. ಬ್ಯಾಂಕ್ ಗೆ ಹೋಗಿ ಖಾತೆ ಆಯಕ್ಟಿವ್ ಇದೆಯೋ ಇಲ್ಲವಾ ಪರಿಶೀಲಿಸಿ

5) ದೂರು ಕೊಡಿ

ಹಲವು ಮಹಿಳೆಯರ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ ಹಣ ಪಾವತಿ ಆಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಅದಾಲತ್ ನಡೆಸಲು ಸರ್ಕಾರ ಮುಂದಾಗಿದೆ. ಹಣ ಜಮೆಯಾಗದೇ ಇರುವವರ ಬಳಿ ಸರ್ಕಾರ ಹೋಗಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿದ್ದು, ಇನ್ನೂ ಹಣ ಸಿಗದವರು ಅದಾಲತ್ ನಲ್ಲಿ ದೂರು ಕೊಡಬಹುದು.

6) ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿ

ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ.ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯಲು ಸರ್ಕಾರ ಇಕೆವೈಸಿ ಕಡ್ಡಾಯಗೊಳಿಸಿದೆ.

7) ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್

ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಇದನ್ನು ಮಾಡದಿದ್ದರೆ ಗೃಹಲಕ್ಷ್ಮಿಯರ ಖಾತೆಗೆ ಹಣ ಬರಲ್ಲ. ಹೀಗಾಗಿ ಕೂಡಲೇ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.

8) ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ಲಿಂಕ್ ಮಾಡುವುದು ಕಡ್ಡಾಯ

ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ಲಿಂಕ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ

9) ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿ, ಸಿಡಿಪಿಓ ಅಧಿಕಾರಿಗಳನ್ನು ಭೇಟಿಯಾಗಿ
ನಿಮ್ಮ ಖಾತೆಗೆ ಇನ್ನೂ ಹಣ ಬರದೇ ಇದ್ರೆ ಹತ್ತಿರದ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿ, ಸಿಡಿಪಿಓ ಅಧಿಕಾರಿಗಳನ್ನು ಭೇಟಿಯಾಗಿ ನಿಮ್ಮ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಯ ಸ್ವೀಕೃತಿ, ಬ್ಯಾಂಕ್ ಪಾಸ್ ಬುಕ್ (ವಿವರ, ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಪ್ರತಿಯನ್ನು ನೀಡಿ ಅವರ ಬಳಿ ಸಲಹೆಯನ್ನ ಪಡೆದುಕೊಳ್ಳಿ, ಏಕೆ ಹಣ ಬರಲಿಲ್ಲ, ಏನು ಸಮಸ್ಯೆಯಾಗಿದೆ..ಏನು ಮಾಡಬೇಕು ಎಂಬ ಸಲಹೆ ಪಡೆಯಿರಿ.

10) ಅಂಚೆ ಕಚೇರಿಯಲ್ಲಿ ಖಾತೆ

ಹಣ ಜಮಾ ಆಗದೇ ಇದ್ದಲ್ಲಿ ಅಂಚೆ ಕಚೇರಿಯಲ್ಲಿ ಖಾತೆ ತೆರೆದರೆ ಮೂರು ಕಂತಿನ 6000 ರೂ. ಖಾತೆಗೆ ಜಮಾ ಆಗುತ್ತದೆ. ರಾಜ್ಯದಲ್ಲಿ ಸುಮಾರು 33 ಐಪಿಪಿಬಿ (India Post payment) ಶಾಖೆಗಳಿದ್ದು, ಹಾಗಾಗಿ ಇಲ್ಲಿ ಖಾತೆ ತೆರೆದರೆ ಗೃಹಲಕ್ಷ್ಮಿ ಯೋಜನೆಯ ಹಣ ಬಹಳ ಬೇಗ ಮಹಿಳೆಯರ ಖಾತೆ ತಲುಪುತ್ತದೆ. ಪೋಸ್ಟ್ ಆಫೀಸ್ ಖಾತೆ ತೆರೆದ ಕೆಲವೇ ಗಂಟೆಗಳಲ್ಲಿ ಹಲವು ಮಹಿಳೆಯರಿಗೆ ಜಮಾ ಆಗಿದೆಯಂತೆ. ಹಾಗಾಗಿ ಮಹಿಳೆಯರಿಗೆ ಪೋಸ್ಟ್ ಆಫೀಸ್ ನಲ್ಲಿ ಅಕೌಂಟ್ ಮಾಡಿಸಲು ಸೂಚನೆ ನೀಡಲಾಗಿದೆ. ಅಲ್ಲದೇ ಮಹಿಳೆಯರು 1902 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಹಿಳೆಯರು ಮಾಹಿತಿ ಪಡೆದುಕೊಳ್ಳಬಹುದು.

About The Author

Leave a Reply

Your email address will not be published. Required fields are marked *

<p>You cannot copy content of this page.</p>