ಹೊಸಪೇಟೆ; ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ದೂರು, ಪ್ರತಿದೂರು ದಾಖಲಾದ ಹಿನ್ನೆಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಟಿಕೆಟ್ ಆಕಾಂಕ್ಷಿಗಳ ಸಭೆಯ ವೇಳೆ ಹೊಸಪೇಟೆ ಬ್ಲಾಕ್ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆ ಯೋಗಲಕ್ಷ್ಮೀ ಮತ್ತು ಬೆಂಬಲಿಗ ಸಂದೀಪ್ ಅವರನ್ನು ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜನವರಿ 2ರಂದು ನಗರದ ಖಾಸಗಿ ಹೊಟೇಲ್ ಒಂದರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ನಡೆದ ಟಿಕೆಟ್ ಆಕಾಂಕ್ಷಿಗಳ ಸಭೆಯ ವೇಳೆ ಗಲಾಟೆ ನಡೆದಿದೆ ಎನ್ನಲಾಗಿದೆ.
ಶಿಲ್ಪಾ ಎಂಬವರ ದೂರಿನ ಮೇರೆಗೆ ಇಬ್ಬರನ್ನು ಬಂಧಿಸಲಾಗಿದೆ.