

ಶೂಟಿಂಗ್ ವೇಳೆ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಬಿದ್ದು ಪಕ್ಕೆಲುಬಿಗೆ ಗಾಯವಾಗಿದೆ. ಸದ್ಯ ಅವರನ್ನು ಹೈದರಾಬಾದ್‌ನ AIG ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮಿತಾಭ್ ಬಚ್ಚನ್ ಹೈದರಾಬಾದ್ ನಲ್ಲಿ ಚಿತ್ರಿಕರಣ ಮಾಡುತ್ತಿರುವ ಸಮಯದಲ್ಲಿ ಈ ಅವಾಂತರ ನಡೆದಿದೆ. ಆಕ್ಷನ್ ಸಿನಿಮಾವೊಂದರ ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಯಾರ ಭೇಟಿಗೂ ಅವಕಾಶ ನೀಡಲಾಗುತ್ತಿಲ್ಲ.
ವೈದ್ಯರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಭಿಮಾನಿಗಳು ಯಾವುದೇ ಕಾರಣಕ್ಕೂ ಆತಂಕ ಪಡಬಾರದು. ಯಾವುದೇ ಪ್ರಾಣಾಪಯವಿಲ್ಲ ಎಂದಿದ್ದಾರೆ. ಪ್ರಾಜೆಕ್ಟ್ ಕೆ ಚಿತ್ರೀಕರಣ ಈ ಹಿಂದೆ ಕೂಲಿ ಚಲನಚಿತ್ರ ವೇಳೆಯೂ ಗಾಯವಾಗಿತ್ತು. ಆದರಿಂದು ಹೈದರಾಬಾದ್‌ನಲ್ಲಿ ಪ್ರಾಜೆಕ್ಟ್ ಕೆ ಚಿತ್ರೀಕರಣದ ವೇಳೆ ಬಬಿದ್ದು ಗಾಯಗೊಂಡಿದ್ದಾರೆ. ಆಕ್ಷನ್ ಶಾಟ್‌ನ ಸಮಯದಲ್ಲಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಿಂದ ಅಮಿತಾಭ್ ಅವರ ಪಕ್ಕೆಲುಬಿನ ಕಾರ್ಟಿಲೆಜ್ ಮುರಿದಿದೆ. ಬಲ ಪಕ್ಕೆಲುಬಿನ ಸ್ನಾಯುಗಳಿಗೂ ಗಾಯವಾಗಿದೆ. ಸದ್ಯ ಹೈದರಾಬಾದ್‌ನ AIG ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಾಗಿದ್ದು, ವೈದ್ಯರ ಸಲಹೆ ಮೇರೆಗೆ ಸ್ಕ್ಯಾನ್ ಮಾಡಿಲಾಗಿದೆ. ಇನ್ನು ಈ ಘಟನೆ ಬಗ್ಗೆ ಅಮಿತಾಭ್ ಬಚ್ಚನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.