ಮೂಡುಬಿದಿರೆ: ಜೈನ ಕಾಶಿ ಮೂಡುಬಿದಿರೆಯಲ್ಲೂ ವರ್ಷಧಾರೆಯಾಗುತ್ತಿದ್ದು ಅನೇಕ ಪ್ರದೇಶಗಳು ಜಲಾವೃತಗೊಂಡಿವೆ.
ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಬೈಲಾರೆಯಲ್ಲಿ ಮೂರು ಮನೆಗಳು ಜಲಾವೃತಗೊಂಡಿದೆ.
ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗ್ಗೆ ಸುರಿದ ಬಾರಿ ಮಳೆಗೆ ಪೇಟೆಯ ಸಮೀಪವಿರುವ ಬೈಲಾರೆಯ ಮೂರು ಮನೆಗಳಿಗೆ ನೀರು ನುಗ್ಗಿದೆ.
ಕಲ್ಯಾಣಿ ಪೂಜಾರ್ತಿ, ಲಲಿತಾ ಪೂಜಾರ್ತಿ ಹಾಗೂ ಉದಯ ಎಂಬವರ ಮನೆಗಳಿಗೆ ನೀರು ನುಗ್ಗಿದ್ದು ಅಪಾರ ಹಾನಿ ಸಂಭವಿಸಿದೆ.
ನೆಲ್ಲಿಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಂಟ್ರಾಡಿಯ ವ್ಯಕ್ತಿಯೊಬ್ಬರು ಗುರುವಾರ ಬೆಳಗ್ಗೆ ಕೆರೆಗೆ ಬಿದ್ದು, ಮೃತಪಟ್ಟಿದ್ದಾರೆ.
ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ನಿವಾಸಿ ನಿರಂಜನ್ (42) ಮೃತಪಟ್ಡವರು.ವಿಕಲಚೇತನರಾಗಿದ್ದ ಅವರು ಅವಿವಾಹಿತರಾಗಿದ್ದರು.